ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ : ಸಂತೋಷ ರೆಡ್ಡಿ
ಬಳ್ಳಾರಿ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿಗಳು ಕೇವಲ ಶಿಕ್ಷಣದಲ್ಲಿ ಮಾತ್ರವಲ್ಲದೆ, ಕ್ರೀಡೆಗಳಲ್ಲಿಯೂ ಆಸಕ್ತಿ ಹೊಂದಬೇಕು ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸಂತೋಷ ರೆಡ್ಡಿ. ಆರ್ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ, ಯುವ ಕ
ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಸಂತೋಷ ರೆಡ್ಡಿ


ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಸಂತೋಷ ರೆಡ್ಡಿ


ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಸಂತೋಷ ರೆಡ್ಡಿ


ಬಳ್ಳಾರಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿದ್ಯಾರ್ಥಿಗಳು ಕೇವಲ ಶಿಕ್ಷಣದಲ್ಲಿ ಮಾತ್ರವಲ್ಲದೆ, ಕ್ರೀಡೆಗಳಲ್ಲಿಯೂ ಆಸಕ್ತಿ ಹೊಂದಬೇಕು ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸಂತೋಷ ರೆಡ್ಡಿ. ಆರ್ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ಬಳ್ಳಾರಿ ಕಚೇರಿ ವತಿಯಿಂದ ಲಿಯಾ ಯೂತ್ ಅಸೋಸಿಯೇಷನ್ ಹಾಗೂ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಜಯಚಂದ್ರ ರೆಡ್ಡಿ.ಇ ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ದೈಹಿಕ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು ಎಂದರು.

ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋಖೋ, 100 ಮೀ. ಓಟ ಸ್ಪರ್ಧೆ, ಗುಂಡು ಎಸೆತ, ಹಗ್ಗ-ಜಗ್ಗಾಟ, ಬ್ಯಾಟ್‍ಮಿಟನ್ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.

ವಿವಿಧ ಸ್ಪರ್ಧೆಗಳ ವಿಜೇತರು:

100 ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮವಾಗಿ ಪೂಜ, ಪಜಲ್, ದ್ವಿತೀಯವಾಗಿ ಸ್ಪಂದನ, ಟಿ.ಗಣೇಶ, ತೃತೀಯವಾಗಿ ಗಾಯಿತ್ರಿ, ರವಿ.

ಕಬ್ಬಡಿ ಸ್ಪರ್ಧೆಯಲ್ಲಿ ಪ್ರಥಮವಾಗಿ ಶ್ರಯನ್, ಪೂಜ, ದ್ವಿತೀಯವಾಗಿ ಜಗನ್, ಉಮ್ಮಿ ಅರನಿ, ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮವಾಗಿ ಶ್ರೀಕಾಂತ, ಉಮ್ಮಿಅರನಿ, ದ್ವಿತೀಯವಾಗಿ ಕುಮಾರ, ರುಷಿಕ್. ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಗಾಯಿತ್ರಿ, ದ್ವಿತೀಯ ರಿಷಿಕ್, ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ವಿನಾಯಕ, ದ್ವಿತೀಯ ಶಶಿ. ಶಾಟ್ ಪುಟ್ ಸ್ಪರ್ಧೆಯಲ್ಲಿ ಪ್ರಥಮ ಕುಮಾರ, ದ್ವಿತೀಯ ಪುಷ್ಪಲತಾ. ಬಾಸ್ಕೇಟ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಕಿರಣ, ದ್ವಿತೀಯ ಪಜಲ್,

ಕ್ರೀಡಾಕೂಟದ ಸ್ಪರ್ಧೆಯ ವಿಜೇತರಿಗೆ ಗಣ್ಯರು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸ್ವತಂತ್ರ ಕಾಲೇಜಿನ ಕಾಲೇಜಿನ ಸಿಇಒ ಕೆ.ವೇಣುಗೋಪಾಲ, ಎಜಿಎಂ ವೆಂಕಟಕೃಷ್ಣ, ಪ್ರಾಂಶುಪಾಲ ತಿಪ್ಪಾರೆಡ್ಡಿ.ಪಿ., ಎನ್.ಐ.ಎಫ್.ಎ.ಎ ಸಂಸ್ಥಾಪಕ ಅಧ್ಯಕ್ಷ ಆರ್.ಕೆ.ಅಬ್ರಹಾಂ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande