ಕೊಪ್ಪಳ ಎಸ್‌ಬಿಐ ನಿಂದ ಡಿ.29 ರಂದು ನಿಮ್ಮ ಹಣ ನಿಮ್ಮ ಹಕ್ಕು
ಕೊಪ್ಪಳ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿ, ವಿಮಾ ಕಂತುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಖಾತೆಯಲ್ಲಿನ ಹಣವನ್ನು ಹಸ್ತಾಂತರಿಸುವ ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಡಿಸೆಂಬರ್ 29 ರಂದು ಬೆಳಿಗ್ಗೆ
ಕೊಪ್ಪಳ ಎಸ್‌ಬಿಐ ನಿಂದ ಡಿ.29 ರಂದು ನಿಮ್ಮ ಹಣ ನಿಮ್ಮ ಹಕ್ಕು


ಕೊಪ್ಪಳ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿ, ವಿಮಾ ಕಂತುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಖಾತೆಯಲ್ಲಿನ ಹಣವನ್ನು ಹಸ್ತಾಂತರಿಸುವ ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದಲ್ಲಿ ಖಾತೆದಾರರು, ಕಾನೂನು ಬದ್ಧ ವಾರಸುದಾರರು ಬ್ಯಾಂಕ್‌ಗಳಲ್ಲಿ 10 ವರ್ಷಗಳಿಗಿಂತಲೂ ಹೆಚ್ಚು ಕಾಲ ನಿಷ್ಕಿçಯವಾಗಿರುವ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ಸೂಕ್ತ ಅಗತ್ಯ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಭಾಗವಹಿಸಿ ಹಕ್ಕು ಪಡೆಯದ ಹಣವನ್ನು ಮರು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಿಮ್ಮ ತಂದೆ, ತಾಯಿ, ಅಜ್ಜಿ, ತಾತಂದಿರು ಬ್ಯಾಂಕ್ ಖಾತೆಗಳಲ್ಲಿ ಹಣವಿಟ್ಟು ಮರೆತಿದ್ದರೆ ಅಂತಹ ಹಣವನ್ನು ಪಡೆಯಬಹುದು. ಈ ಖಾತೆಗಳಿಗೆ ನಾಮನಿರ್ದೇಶನ ಮಾಡಿದ್ದರೆ ಅಂತವರಿಗೆ ಹಣ ದೊರೆಯುತ್ತದೆ. ಇಲ್ಲದಿದ್ದರೆ ವಂಶವೃಕ್ಷ ಮತ್ತು ಪ್ರಮಾಣ ಪತ್ರಗಳನ್ನು ಪಡೆದು ಸಂಬ0ಧಿಸಿದ ವಾರಸುದಾರರಿಗೆ ಈ ನಿಷ್ಕಿçಯ ಖಾತೆಗಳಲ್ಲಿರುವ ಹಣ ನೀಡಲಾಗುತ್ತದೆ.

ನಿಷ್ಕಿಯ ಖಾತೆಯಲ್ಲಿನ ಹಣದ ಮಾಹಿತಿಯನ್ನು https://udgram.rbi.org.in ನಲ್ಲಿ ಆನ್‌ಲೈನ್ ಮೂಲಕವೂ ಪಡೆಯಬಹುದು. ನಿಷ್ಕಿçಯ ಖಾತೆಗಳಿಗೆ ಸಂಬ0ಧಪಟ್ಟವರು ಅಂದು ಅಭಿಯಾನದಲ್ಲಿ ಪಾಲ್ಗೊಳ್ಳಬಹುದು. ಈ ಅಭಿಯಾನವು ಬ್ಯಾಂಕ್‌ಗಳಲ್ಲಿ ನಿರಂತರವಾಗಿ ನಡೆಯಲಿದೆ ಎಂದು ಲೀಡ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಮಾರುತಿ ಕರ್ಪಾನಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande