


ಬಳ್ಳಾರಿ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಸೋಮವಾರ ಬೆಳಿಗ್ಗೆ 9.30ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೇ ಸಾಲಿನ ನೂತನ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾ ಅಧ್ಯಕ್ಷ ಎನ್.ವೀರಭದ್ರಗೌಡ ಅಧ್ಯಕ್ಷತೆವಹಿಸಲಿದ್ದು. ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಮತ್ತು ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಅವರು ಪ್ರತಿಜ್ಞಾ ವಿಧಿ ಬೋಧನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಈ. ತುಕಾರಾಂ, ಗ್ರಾಮೀಣ ಶಾಸಕ, ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕರಾದ ಕಂಪ್ಲಿ ಶಾಸಕ ಜೆ.ಎನ್.ಗಣೇಶ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ, ಲೀಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜನೇಯಲು
ಆಗಮಿಸಲಿದ್ದಾರೆ.
ಬಳ್ಳಾರಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಮತ್ತು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ. ತುಕಾರಾಂ ರಾವ್ ಅವರ ಗೌರವ ಉಪಸ್ಥಿತಿ ಇರಲಿದೆ.
ಕಾರ್ಯಕ್ರಮಕ್ಕೆ ಕಾರ್ಯ ನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರು ಪಾಲ್ಗೊಳ್ಳಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ನರಸಿಂಹ ಮೂರ್ತಿ ಕುಲಕರ್ಣಿ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್