
ನವದೆಹಲಿ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ನಡೆಯುವ ಈ ಮಹತ್ವದ ಸಭೆಯಲ್ಲಿ ಮುಂಬರುವ ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಗಳು, ವೋಟ್ ಚೋರಿ ಆರೋಪಗಳು, ನ್ಯಾಷನಲ್ ಹೆರಾಲ್ಡ್ ಪ್ರಕರಣ ಸೇರಿದಂತೆ ಹಲವು ರಾಜಕೀಯ ಹಾಗೂ ಸಂಘಟನಾ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯುವ ಸಾಧ್ಯತೆ ಇದೆ.
ಸಭೆಯಲ್ಲಿ ದೇಶದಾದ್ಯಂತ ಪಕ್ಷದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವ ಸಾಧ್ಯತೆಯೂ ಇದೆ.
ಈ ಸಭೆಯ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ದೆಹಲಿಯ ಎಐಸಿಸಿ ಕಚೇರಿಗೆ ಆಗಮಿಸಿದ್ದಾರೆ. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾದ ನಂತರ ಅವರು ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳು, ಸಂಘಟನಾ ವಿಚಾರಗಳು ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa