ಕೋಗಿಲು ತ್ಯಾಜ್ಯ ವಿಲೇವಾರಿ ಸ್ಥಳ ತೆರವು ಅನಿವಾರ್ಯ : ಸಿದ್ದರಾಮಯ್ಯ
ನವದೆಹಲಿ, 27 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಅತಿಕ್ರಮವಾಗಿ ನಿರ್ಮಿಸಿದ್ದ ಗುಡಿಸಲುಗಳನ್ನು ತೆರವುಗೊಳಿಸಿರುವುದು ಅನಿವಾರ್ಯ ಕ್ರಮವಾಗಿದ್ದು, ಆ ಪ್ರದೇಶವು ಮಾನವ ವಸತಿಗೆ ಯೋಗ್ಯವಾಗಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾ
Cm


ನವದೆಹಲಿ, 27 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಅತಿಕ್ರಮವಾಗಿ ನಿರ್ಮಿಸಿದ್ದ ಗುಡಿಸಲುಗಳನ್ನು ತೆರವುಗೊಳಿಸಿರುವುದು ಅನಿವಾರ್ಯ ಕ್ರಮವಾಗಿದ್ದು, ಆ ಪ್ರದೇಶವು ಮಾನವ ವಸತಿಗೆ ಯೋಗ್ಯವಾಗಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ವಾಸವಿದ್ದ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರಗೊಳ್ಳುವಂತೆ ನೋಟೀಸ್ ನೀಡಲಾಗಿತ್ತು. ಆದರೆ ಯಾವುದೇ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆ.

ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಮುಖ್ಯಮಂತ್ರಿ, ತೆರವುಗೊಳಿಸಲಾದ ಎಲ್ಲ ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯ, ಊಟ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅಕ್ರಮ ವಸತಿ ಹೊಂದಿದ್ದವರಲ್ಲಿ ಬಹುಪಾಲು ಮಂದಿ ವಲಸೆ ಕಾರ್ಮಿಕರಾಗಿದ್ದು, ಸ್ಥಳೀಯ ನಿವಾಸಿಗಳಲ್ಲ ಎಂಬುದನ್ನೂ ಸಿಎಂ ಉಲ್ಲೇಖಿಸಿದರು. ಆದಾಗ್ಯೂ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಸೂಕ್ತ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಪ್ರಕರಣವನ್ನು ‘ಬುಲ್ಡೋಜರ್ ನ್ಯಾಯ ಎಂದು ಟೀಕಿಸುತ್ತಿರುವುದನ್ನು ತಿರಸ್ಕರಿಸಿದ ಸಿದ್ದರಾಮಯ್ಯ, “ಬುಲ್ಡೋಜರ್ ನ್ಯಾಯ ಮತ್ತು ಅಕ್ರಮ ಒತ್ತುವರಿ ತೆರವಿನ ನಡುವೆ ಭಾರಿ ವ್ಯತ್ಯಾಸವಿದೆ” ಎಂದು ಹೇಳಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಗಳಿಂದ ಟೀಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande