ಏಕಬಳಕೆ ಪ್ಲಾಸ್ಟಿಕ್ ಸಾಮಗ್ರಿಗಳ ನಿಷೇಧ
ಹಾಸನ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹಾಸನ ಮಹಾನಗರ ವ್ಯಾಪ್ತಿಯ ವರ್ತಕರಿಗೆ ಹಾಗೂ ಬಳಕೆದಾರರು ಪ್ಲಾಸ್ಟಿಕ್ ತ್ಯಾಜ್ಯವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮ-2016ರನ್ವಯ ಘನತ್ಯಾಜ್ಯ ನಿರ್ವಹಣಾ ಉಪನಿಯಮಗಳು-2019ನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಹಾಗೂ ಅಳವಡಿಸಿಕೊಳ್ಳಲಾಗಿದ್ದು, ಇದರ
ಏಕಬಳಕೆ ಪ್ಲಾಸ್ಟಿಕ್ ಸಾಮಗ್ರಿಗಳ ನಿಷೇಧ


ಹಾಸನ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹಾಸನ ಮಹಾನಗರ ವ್ಯಾಪ್ತಿಯ ವರ್ತಕರಿಗೆ ಹಾಗೂ ಬಳಕೆದಾರರು ಪ್ಲಾಸ್ಟಿಕ್ ತ್ಯಾಜ್ಯವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮ-2016ರನ್ವಯ ಘನತ್ಯಾಜ್ಯ ನಿರ್ವಹಣಾ ಉಪನಿಯಮಗಳು-2019ನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಹಾಗೂ ಅಳವಡಿಸಿಕೊಳ್ಳಲಾಗಿದ್ದು, ಇದರ ಅನ್ವಯ ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಏಕಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಬಳಕೆ ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ನಿಯಮಗಳ ಅನ್ವಯ ದಂಡ ವಿಧಿಸಲಾಗುವುದು.

ಮಹಾನಗರ ಪಾಲಿಕೆಯಿಂದ ಪ್ಲಾಸ್ಟಿಕ್ ಬಳಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ಕಂಡುಬAದಲ್ಲಿ ರೂ. 1000 ದಿಂದ 10,000 ವರಗೂ ದಂಡ ವಿಧಿಸಲಾಗುವುದಲ್ಲದೇ ಕಾನೂನು ಕ್ರಮ ಜರುಗಿಸಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ತ್ಯಜಿಸಿ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಹಕರಿಸುವಂತೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande