
ನವದೆಹಲಿ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾತ್ಮಾ ಗಾಂಧಿ, ಪಂಡಿತ್ ಜವಾಹರಲಾಲ್ ನೆಹರು, ನೇತಾಜಿ ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರಂತಹ ಮಹಾನ್ ನಾಯಕರ ನೇತೃತ್ವದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಐತಿಹಾಸಿಕ ಪಕ್ಷವಾಗಿದೆ ಎಂದು ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಸ್ಥಾಪನಾ ದಿನದ ಅಂಗವಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, “ಅನ್ಯಾಯ, ದಬ್ಬಾಳಿಕೆ ಮತ್ತು ಹಿಂಸೆಯ ವಿರುದ್ಧ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸಹೋದರತ್ವವನ್ನು ಅಸ್ತ್ರಗಳಾಗಿ ಬಳಸಿಕೊಂಡು ನಮ್ಮ ನಾಯಕರು ಹೋರಾಡಿದರು. ಪ್ರಜಾಪ್ರಭುತ್ವ, ಸಮಾನತೆ, ನ್ಯಾಯ ಮತ್ತು ರಾಷ್ಟ್ರೀಯ ಒಗ್ಗಟ್ಟಿನ ಮೌಲ್ಯಗಳನ್ನು ಪ್ರತಿಪಾದಿಸಿ ಅವರು ಅವಿಶ್ರಾಂತ ಹೋರಾಟ ನಡೆಸಿದರು” ಎಂದು ತಿಳಿಸಿದ್ದಾರೆ.
“ಅಂತಹ ಮಹಾನ್ ಪರಂಪರೆಯುಳ್ಳ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಭಾಗವಾಗಿರುವುದು ನನಗೆ ಅಪಾರ ಹೆಮ್ಮೆ ಮತ್ತು ದೊಡ್ಡ ಸೌಭಾಗ್ಯದ ವಿಷಯವಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ, ಕಾಂಗ್ರೆಸ್ ಸ್ಥಾಪನಾ ದಿನದ ಪ್ರಯುಕ್ತ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಹಾಗೂ ಕೋಟ್ಯಂತರ ಬೆಂಬಲಿಗರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಅವರು ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa