ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ; ಹುಬ್ಬಳ್ಳಿಯಲ್ಲಿ ಬೃಹತ್ ಧ್ವಜ ಮೆರವಣಿಗೆ
ಹುಬ್ಬಳ್ಳಿ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಇಂಟೆಕ್ ಸಮಿತಿಯ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಬೃಹತ್ ಧ್ವಜದ ಭವ್ಯ ಮೆರವಣಿಗೆಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಚಾಲನೆ ನೀಡಿದ
Cong flag procession


ಹುಬ್ಬಳ್ಳಿ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಇಂಟೆಕ್ ಸಮಿತಿಯ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಬೃಹತ್ ಧ್ವಜದ ಭವ್ಯ ಮೆರವಣಿಗೆಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯವಾಗಿದೆ ಎಂದು ಹೇಳಿದರು. ಪಕ್ಷದ ಸಂಸ್ಥಾಪನಾ ದಿನಾಚರಣೆ ಕೇವಲ ಆಚರಣೆಯಲ್ಲ, ಪಕ್ಷದ ತತ್ವಗಳು ಮತ್ತು ಆದರ್ಶಗಳನ್ನು ಜನಸಾಮಾನ್ಯರ ನಡುವೆ ತಲುಪಿಸುವ ಮಹತ್ವದ ಸಂದರ್ಭವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಇಂಟೆಕ್ ರಾಜ್ಯಾಧ್ಯಕ್ಷರು, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande