ಕಾಂಗ್ರೆಸ್ ಸಂಸ್ಥಾಪನಾ ದಿನ ; ತ್ಯಾಗ–ಹೋರಾಟದ ಪರಂಪರೆಗೆ ನಾಯಕರ ಗೌರವ
ನವದೆಹಲಿ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 141ನೇ ಸಂಸ್ಥಾಪನಾ ದಿನದ ಅಂಗವಾಗಿ, ಭಾನುವಾರ ಕಾಂಗ್ರೆಸ್‌ನ ಉನ್ನತ ನಾಯಕರು ಪಕ್ಷದ ಕಾರ್ಯಕರ್ತರು ಮತ್ತು ದೇಶದ ಜನತೆಗೆ ಶುಭಾಶಯಗಳನ್ನು ಸಲ್ಲಿಸಿ, ತ್ಯಾಗ ಮತ್ತು ಹೋರಾಟದ ಮಹಾನ್ ಪರಂಪರೆಗೆ ಗೌರವ ಸಲ್ಲಿಸಿದರು. ಈ ಸಂ
Cong foundation day


ನವದೆಹಲಿ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 141ನೇ ಸಂಸ್ಥಾಪನಾ ದಿನದ ಅಂಗವಾಗಿ, ಭಾನುವಾರ ಕಾಂಗ್ರೆಸ್‌ನ ಉನ್ನತ ನಾಯಕರು ಪಕ್ಷದ ಕಾರ್ಯಕರ್ತರು ಮತ್ತು ದೇಶದ ಜನತೆಗೆ ಶುಭಾಶಯಗಳನ್ನು ಸಲ್ಲಿಸಿ, ತ್ಯಾಗ ಮತ್ತು ಹೋರಾಟದ ಮಹಾನ್ ಪರಂಪರೆಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅಜಯ್ ಮಾಕನ್, ಲಾಲ್ಜಿ ದೇಸಾಯಿ, ದಿಗ್ವಿಜಯ್ ಸಿಂಗ್, ಸಲ್ಮಾನ್ ಖುರ್ಷಿದ್, ಜೈರಾಮ್ ರಮೇಶ್ ಸೇರಿದಂತೆ ಹಲವು ಹಿರಿಯ ನಾಯಕರು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಾದ ಇಂದಿರಾ ಭವನದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡು, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಾ ಜನರ ಕಲ್ಯಾಣ, ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತ ಬಂದಿದೆ. 140 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ನಮ್ಮ ಪಕ್ಷವು ಸತ್ಯ, ಅಹಿಂಸೆ, ತ್ಯಾಗ, ಹೋರಾಟ ಮತ್ತು ದೇಶಭಕ್ತಿಯ ಮಹಾನ್ ಕಥೆಯನ್ನು ಹೊತ್ತುಕೊಂಡಿದೆ” ಎಂದು ಹೇಳಿದರು.

ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವುದು ಮತ್ತು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವುದಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದರು.

ದ್ವೇಷ ಮತ್ತು ವಿಭಜನೆಯ ಶಕ್ತಿಗಳ ವಿರುದ್ಧ ಕಾಂಗ್ರೆಸ್ ದೃಢವಾಗಿ ನಿಂತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande