ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣಕ್ಕೆ ಸರಕಾರ ವಿಫಲ : ಆರ್. ಅಶೋಕ
ಬೆಂಗಳೂರು, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದ ಯುವ ಜನಾಂಗದ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಸಾಮ
Ashok


ಬೆಂಗಳೂರು, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದ ಯುವ ಜನಾಂಗದ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಅಧಿವೇಶನದ ವೇಳೆ ಡ್ರಗ್ಸ್ ದಂಧೆ ಕುರಿತು ಪ್ರಸ್ತಾಪಿಸಿದಾಗ, ಅದರ ಗಂಭೀರತೆಯನ್ನು ಅರಿಯದೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು “ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ” ಎಂದು ಉಡಾಫೆ ಉತ್ತರ ನೀಡಿದ್ದರು ಎಂದು ಅಶೋಕ ಟೀಕಿಸಿದ್ದಾರೆ.

ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಚ್ಚಿ ಸುಮಾರು ₹390 ಕೋಟಿ ಮೌಲ್ಯದ 192 ಕೆಜಿ ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು, ಇದೀಗ ಬೆಂಗಳೂರಿನ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಸುಮಾರು ₹56 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿದ ಅವರು, ರಾಜ್ಯದಲ್ಲಿ ಮಾದಕ ವಸ್ತು ಜಾಲ ಎಷ್ಟು ವ್ಯಾಪಕವಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.

ಶೌರ್ಯ, ಸಾಹಸ ಮತ್ತು ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥ ಆಡಳಿತದಿಂದ ನಿತ್ರಾಣಗೊಂಡಿದೆ ಎಂದು ಆರೋಪಿಸಿದ ಅಶೋಕ, “ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆಹಚ್ಚಲು ಮಹಾರಾಷ್ಟ್ರದ ಪೊಲೀಸರು ಬರಬೇಕಾದ ಸ್ಥಿತಿ ನಿರ್ಮಾಣವಾಗಿದ್ದರೆ, ಕರ್ನಾಟಕ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಯಾವ ಹೊಣೆಗಾರಿಕೆಯನ್ನು ನಿಭಾಯಿಸುತ್ತಿದೆ?” ಎಂದು ಪ್ರಶ್ನಿಸಿದರು.

ಯುವ ಜನಾಂಗದ ಭವಿಷ್ಯಕ್ಕೆ ಮಾರಕವಾಗಿರುವ ಈ ಡ್ರಗ್ಸ್ ದಂಧೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದಕ್ಕೆ ಕಡಿವಾಣ ಹಾಕುವಲ್ಲಿ ಸರ್ಕಾರ ವಿಫಲವಾದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಆರ್. ಅಶೋಕ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande