ಹಾವೇರಿ ವಿವಿ ಭವಿಷ್ಯದಲ್ಲಿ ಮಾದರಿ ವಿವಿಯಾಗಲಿದೆ : ಬೊಮ್ಮಾಯಿ
ಹಾವೇರಿ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಯಾವುದೇ ಅನುದಾನ ಇಲ್ಲದೇ ಹಾವೇರಿ ವಿಶ್ವ ವಿದ್ಯಾಲಯ ನಡೆಯುತ್ತಿದೆ. ಅತ್ಯಂತ ಕಡಿಮೆ ಮೂಲ ಸೌಕರ್ಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಕೊಡುತ್ತಿದ್ದಾರೆ. ಪರೀಕ್ಷೆ ನಡೆದು ಹದಿನೈದು ದಿನದಲ್ಲಿ ಫಲಿತಾಂಶ ಸಿಗುತ್ತಿದೆ. ಮುಂದಿನ ದಿ
BsB


ಹಾವೇರಿ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಯಾವುದೇ ಅನುದಾನ ಇಲ್ಲದೇ ಹಾವೇರಿ ವಿಶ್ವ ವಿದ್ಯಾಲಯ ನಡೆಯುತ್ತಿದೆ. ಅತ್ಯಂತ ಕಡಿಮೆ ಮೂಲ ಸೌಕರ್ಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಕೊಡುತ್ತಿದ್ದಾರೆ. ಪರೀಕ್ಷೆ ನಡೆದು ಹದಿನೈದು ದಿನದಲ್ಲಿ ಫಲಿತಾಂಶ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಮಾದರಿ ವಿಶ್ವ ವಿದ್ಯಾಲಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾವೇರಿ ವಿಶ್ವ ವಿದ್ಯಾಲಯದಲ್ಲಿ ಕನಿಷ್ಠ ಹುದ್ದೆಗಳನ್ನು ಸೃಷ್ಟಿ ಮಾಡಿ ನೇಮಕಾತಿಯನ್ನಾದರೂ ಮಾಡಿದರೆ, ಮುಂದಿನ ದಿನಗಳಲ್ಲಿ ಯುಜಿಸಿಯಿಂದ ಅನುದಾನ ತರಲು ಅನುಕೂಲವಾಗಲಿದೆ. ಅದನ್ನು ಮಾಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande