
ಬೀದರ್, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹೆದ್ದಾರಿ ಬದಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ನೆಡಲಾದ ನೆಡುತೋಪಗಳನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗಿಡಗಳ ಬೆಳವಣಿಗೆ, ಪೋಷಣೆ ಹಾಗೂ ಸಂರಕ್ಷಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದ ಸಚಿವರು, ನೆಟ್ಟ ಗಿಡಗಳು ನಾಶವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ನೀರಾವರಿ, ಬೇಲಿ ವ್ಯವಸ್ಥೆ ಹಾಗೂ ನಿಯಮಿತ ನಿರ್ವಹಣೆಗೆ ಆದ್ಯತೆ ನೀಡಬೇಕೆಂದು ಹೇಳಿದರು.
ಪರಿಶೀಲನಾ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa