
ಗದಗ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದ ಮೇರೆಗೆ ಶಿರಹಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸಂಚಾರದ ವಲಯಗಳಲ್ಲಿನ, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳಲ್ಲಿರುವ ಬೀದಿ ನಾಯಿಗಳಿಗೆ ಚುಚ್ಚುಮದ್ದು ಹಾಕಿಸಿ, ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ನಿರ್ವಹಿಸಲಾಗುತ್ತಿದೆ.
ಶಸ್ತ್ರ ಚಿಕಿತ್ಸೆ ಮಾಡಿದ ನಂತರ ಬೀದಿ ನಾಯಿಗಳನ್ನು ದತ್ತು ತೆಗೆದುಕೊಂಡು ಆಶ್ರಯತಾಣದಲ್ಲಿ ಪೋಷಣೆ ಮಾಡಲು ಆಸಕ್ತಿಯುಳ್ಳ, ಇಚ್ಛೆಯುಳ್ಳ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಉಚಿತವಾಗಿ ಸೇವೆಯನ್ನು ಸಲ್ಲಿಸಲು ಇಚ್ಚೇಯುಳ್ಳವರು ಪಟ್ಟಣ ಪಂಚಾಯತ್ ಶಿರಹಟ್ಟಿ ಜನೆವರಿ 2 ರೊಳಗಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಶಿರಹಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬೀದಿ ನಾಯಿಗಳನ್ನು ದತ್ತು ತೆಗೆದುಕೊಂಡು ಪೋಷಣೆ ಮಾಡಲು ಇಚ್ಛೆಯುಳ್ಳವರು ಜನೆವರಿ 2 ರೊಳಗಾಗಿ ಪಟ್ಟಣ ಪಂಚಾಯತಿ ಅನುಮತಿ ಪಡೆದು ದತ್ತು ತೆಗೆದುಕೊಳ್ಳಬಹುದಾಗಿದೆ. ಎಂದು ಶಿರಹಟ್ಟಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP