ಡಿ.30ರಂದು ಪಿಂಚಣಿ ದಿನಾಚರಣೆ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ
ಚಿತ್ರದುರ್ಗ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸರ್ಕಾರದ ಆದೇಶದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಚಿತ್ರದುರ್ಗ ಉಪವಿಭಾಗದ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರು ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ನಾಡಕಚೇರಿಯ ಆವರಣದಲ್ಲಿ ಇದೇ ಡಿ.30ರಂದು ಬೆ
ಡಿ.30ರಂದು ಪಿಂಚಣಿ ದಿನಾಚರಣೆ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ


ಚಿತ್ರದುರ್ಗ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸರ್ಕಾರದ ಆದೇಶದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಚಿತ್ರದುರ್ಗ ಉಪವಿಭಾಗದ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರು ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ನಾಡಕಚೇರಿಯ ಆವರಣದಲ್ಲಿ ಇದೇ ಡಿ.30ರಂದು ಬೆಳಿಗ್ಗೆ 11ಕ್ಕೆ ಪಿಂಚಣಿ ದಿನಾಚರಣೆ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪಿಂಚಣಿ ದಿನಾಚರಣೆ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಮೂಲಕ ಪಿಂಚಣಿ ಪಡೆಯುವ ಎಲ್ಲಾ ಪಿಂಚಣಿದಾರರು ಪಿಂಚಣಿಗೆ ಸಂಬಂಧಿಸಿದ ಕುಂದು ಕೊರತೆಗಳ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande