ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲು : ಬೊಮ್ಮಾಯಿ
ಹಾವೇರಿ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮೈಸೂರಿನಲ್ಲಿ ಡ್ರಗ್ ತಯಾರಿಸುವ ಕಾರ್ಖಾನೆ, ಬೆಂಗಳೂರಿನಲ್ಲಿ ಡ್ರಗ್ ಮಾರಾಟ ಅಡ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂದು ಪತ್ತೆ ಹಚ್ಚುತ್ತಾರೆ ಎಂದರೆ ರಾಜ್ಯದ ಪೊಲೀಸರು ಡ್ರಗ್ ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸ
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲು : ಬೊಮ್ಮಾಯಿ


ಹಾವೇರಿ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮೈಸೂರಿನಲ್ಲಿ ಡ್ರಗ್ ತಯಾರಿಸುವ ಕಾರ್ಖಾನೆ, ಬೆಂಗಳೂರಿನಲ್ಲಿ ಡ್ರಗ್ ಮಾರಾಟ ಅಡ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂದು ಪತ್ತೆ ಹಚ್ಚುತ್ತಾರೆ ಎಂದರೆ ರಾಜ್ಯದ ಪೊಲೀಸರು ಡ್ರಗ್ ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಎಲ್ಲಿ ಹೋದಲ್ಲೂ ಕೂಡ ಡ್ರಗ್ ಸಿಗುತ್ತಿದೆ. ರಾಣೆಬೆನ್ನೂರು, ಹಾವೇರಿಯಲ್ಲಿ ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಡ್ರಗ್ ಸಿಗುತ್ತಿದೆ. ಎಸ್ಪಿ ಗೆ ವಾರ್ನಿಂಗ್ ಮಾಡಿದ್ದೇವೆ. ಆದರೂ ಏನು ಕ್ರಮ ಕೈಗೊಳ್ಳುತ್ತಿಲ್ಲ. ಅಧಿಕಾರಿಗಳಿಗೆ ಪೋಸ್ಟಿಂಗ್ ಮಾಡುವಾಗ ದುಡ್ಡು ಪಡೆದಿರುವುದರಿಂದ ಪೊಲೀಸರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಾರೆ. ಓಸಿ. ಇಸ್ಟೇಟ್, ಡ್ರಗ್ ಮಾರಾಟಗಾರರೊಂದಿಗೆ ಶಾಮೀಲಾಗಿದ್ದಾರೆ. ಹೇಗೆ ಉಡ್ತಾ ಪಂಜಾಬ್ ಇತ್ತೊ ಅದೇ ರೀತಿ ಉಡ್ತಾ ಕರ್ನಾಟಕ ಆಗಲಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande