
ಗದಗ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಣ್ಣು ನೀರು ಸಂರಕ್ಷಣೆ ಪ್ರತಿಯೊಬ್ಬ ವ್ಯಕ್ತಿಯ ಆದ್ಯ ಕರ್ತವ್ಯವಾಗಿದ್ದು ಪ್ರತಿಯೊಬ್ಬ ರೈತರು ರಿವಾರ್ಡ್ ನಂತ ರೈತಪರ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ನೀಲಗುಂದ ವಲಯದಲ್ಲಿ ಕಣವಿ ಹೊಸೂರು ಮುಳಗುಂದ ನೀಲಗುಂದ ಸೇರಿದಂತೆ ಸುತ್ತಲ ಗ್ರಾಮಗಳಲ್ಲಿ ಅನುಷ್ಠಾನಗೊಂಡ ರಿವಾರ್ಡ್ ಯೋಜನೆಯಿಂದ 4,800 ಕ್ಕೂ ಅಧಿಕ ರೈತ ಕುಟುಂಬಗಳಿಗೆ ಯೋಜನೆಯ ನೆರವಾಗಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಕೆ ಪಾಟೀಲ ಹೇಳಿದರು..
ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಎಸ್ ಜೆಜೆಮ ಹೈಸ್ಕೂಲ್ ಮೈದಾನದಲ್ಲಿ ಜರುಗಿದ ಜಲಾನಯನ ಇಲಾಖೆ ಕೃಷಿ ಇಲಾಖೆ, ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ರಿವಾರ್ಡ್ ಯೋಜನೆ ಲೋಕಾರ್ಪಣೆ ಹಾಗೂ ರೈತರಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಂದಾಜು 16 ಕೋಟಿಗಳ ವೆಚ್ಚದ ಯೋಜನೆಯಲ್ಲಿ ಒಟ್ಟು 10 ಕೋಟಿ 51 ಲಕ್ಷ ರೂಗಳ ಕಾಮಗಾರಿ ರಿವಾರ್ಡ್ ಯೋಜನೆ ಪೂರ್ಣಗೊಂಡಿದ್ದು ಇನ್ನುಳಿದ 5 ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಕೃಷಿ ಆಧಾರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ.
ಒಟ್ಟು 14500 ಎಕರೆ ಭೂಮಿಯಲ್ಲಿ ವಿವಿಧ ಚಟುವಟಿಕೆಗಳನ್ನು ಕೈಗೊಂಡಿದ್ದು in ಬದು ನಿರ್ಮಾಣ, ಚೆಕ್ ಡ್ಯಾಮ್ ಕೃಷಿಹೊಂಡ ಹಾಗೂ ಸ್ವಸಹಾಯ ಸಂಘಗಳಿಗೆ 50,000 ರೂಗಳ ಗಳಂತೆ ಸುತ್ತಿನದಿ ವಿತರಿಸಲಾಗಿದೆ ಎಂದರು.
ಗ್ರಾಮೀಣ ಭಾಗದ ರೈತರಿಗೆ ರಿವಾರ್ಡ್ ಒಂದು ಯೋಜನೆ ಕೃಷಿ ಯಡಿಕೆ ವಿಶೇಷ ಆಸಕ್ತಿ ಹಾಗೂ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಪ್ರಾಮಾಣಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಿದ್ದು ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ ಎಂದರು.
ಅಂತರಾಷ್ಟ್ರೀಯ ಜಲತಜ್ಞ ರಾಜೇಂದ್ರ ಸಿಂಗ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇಂದು ಮಣ್ಣು ಹಾಗೂ ನೀರಿನ ಸಂರಕ್ಷಣೆ ಪ್ರತಿಯೊಬ್ಬರಿಗೂ ರಕ್ಷಿಸುವುದು ಅತಿ ಮುಖ್ಯವಾಗಿದ್ದು ಕರ್ನಾಟಕದಲ್ಲಿ ಮಣ್ಣು ನೀರು ಸಂರಕ್ಷಣ ಹೆಚ್ಚು ಅನುಕೂಲಕರ ವಾತಾವರಣವಿದ್ದು ಪ್ರತಿಯೊಬ್ಬರು ಮಕ್ಕಳಂತೆ ಮಣ್ಣು ಹಾಗೂ ನೀರನ್ನು ಪರಿಸರವನ್ನು ಸಂರಕ್ಷಣೆ ಮಾಡಿಟ್ಟುಕೊಳ್ಳುವುದು ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿ ಆರ್ ಪಾಟೀಲ ಮಾತನಾಡಿ ಗದಗ ತಾಲೂಕಿನ ಹಲವು ಭಾಗಗಳಲ್ಲಿ ಮಣ್ಣು ನೀರು ಸಂರಕ್ಷಣೆಯ ಪರಿಸರ ಬೆಳೆಸುವ ಹಾಗೂ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರೈತರ ಅನುಕೂಲಕ್ಕಾಗಿ ಸರ್ಕಾರದಲ್ಲಿ ಸಚಿವರಾಗಿರುವ ಎಚ್ ಕೆ ಪಾಟೀಲ ಈ ಯೋಜನೆಯನ್ನು ತುಂಬಾ ಮುಖ್ಯ ವರ್ಜಿ ವಹಿಸಿ ಜನರಿಗೆ ನೀಡಿದ್ದಾರೆ ಎಂದರು.
ರೈತರು ಸ್ವಾವಲಂಬನೆಯಿಂದ ಬದುಕಬೇಕಾದರೆ ರೈತ ಬೆಳೆದ ಉತ್ಪನ್ನಗಳಿಗೆ ಅಧಿಕ ಬೆಲೆ ಸಿಗಬೇಕು ಆ ನಿಟ್ಟಿನಲ್ಲಿ ಸರ್ಕಾರ ವಿಶೇಷ ಕಾನೂನುಗಳನ್ನು ರೂಪಿಸುವ ಮೂಲಕ ರೈತರ ನೆರವಿಗೆ ಬರಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿಎಂ ಶ್ರೀಧರ್, ಜಂಟಿ ಕೃಷಿ ನಿರ್ದೇಶಕಿ ಚೇತನ ಪಾಟೀಲ, ಕೃಷಿ ಅಧಿಕಾರಿ ಸ್ಪೂರ್ತಿ ಜಿಎಸ್, ಸಹಾಯಕ ಕೃಷಿ ಅಧಿಕಾರಿ ಮಲ್ಲಯ್ಯ ಕೊರವ ನವರ, ಹಿರಿಯರಾದ ಎಸ್ ಎಂ ನೀಲಗುಂದ ಎಂಡಿ ಭಟ್ಟೂರ, ಷಣ್ಮುಖಪ್ಪ ಬಡ್ನಿ, ನಾಗರಾಜ ದೇಶಪಾಂಡೆ, ಕೆ ಎಲ್ ಕರಿಗೌಡ್ರ ಸೇರಿದಂತೆ ಮತ್ತು ತರರು ಇದ್ದರು.
ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ತಾಲೂಕು ಹಾಗೂ ಜಿಲ್ಲಾಮಟ್ಟದ ಪ್ರತಿಭಾವಂತ ರೈತರನ್ನು ಸನ್ಮಾನಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / lalita MP