
ಹಾಸನ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ತೋಟಗಾರಿಕೆ ಇಲಾಖೆ ವತಿಯಿಂದ ಸುಸ್ಥಿರ ಹಾಗೂ ಗುಣಮಟ್ಟದ ಆಲೂಗಡ್ಡೆ ಬೀಜೋತ್ಪಾದನಾ ಕ್ರಮಗಳು ಎಂಬ ವಿಷಯದ ಕುರಿತು ಒಂದು ದಿನ ಕಾರ್ಯಾಗಾರವನ್ನು ಜ.02 ರಂದು ಬೆಳಗ್ಗೆ 10 ಗಂಟೆಗೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಾಗಾರಕ್ಕೆ ಆಲೂಗಡ್ಡೆ ವರ್ತಕರು, ರೈತರು, ರೈತ ಉತ್ಪಾದಕರ ಸಂಸ್ಥೆಗಳ ಪ್ರತಿನಿಧಿಗಳು, ವಿಜ್ಞಾನಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲ್ಲಿದ್ದಾರೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa