
ಹುಬ್ಬಳ್ಳಿ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ.57 ರ ದೇಶಪಾಂಡೆ ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಮಹೇಶ ಟೆಂಗಿನಕಾಯಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ದೇಶಪಾಂಡೆ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಗುಣಮಟ್ಟದ ರಸ್ತೆ ನಿರ್ಮಾಣದ ಮೂಲಕ ನಾಗರಿಕರಿಗೆ ಸುಗಮ ಸಂಚಾರ ಸೌಲಭ್ಯ ಒದಗಿಸುವ ಉದ್ದೇಶವಾಗಿದೆ ಎಂದು ಹೇಳಿದರು. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ವಿ.ಜಿ. ನಾಡಗೌಡ, ಚಂದ್ರಕಾಂತ ಸವದತ್ತಿ, ಅನುಪ ವಂಟಮುರಿ, ಶ್ರೀನಿವಾಸ ದೇಸಾಯಿ, ಮಯೂರ ಠಕ್ಕರ, ಡಾ. ನಾಡಕರ್ಣಿ, ಧರ್ಮರಾಜ ಪೂಜಾರಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa