ಬಾಲ್ಯ ವಿವಾಹದಿಂದ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ : ಡಿಹೆಚ್‌ಓ
ಸಂಡೂರು, 29 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಾಲ್ಯ ವಿವಾಹವು ಹದಿಹರೆಯದ ಗರ್ಭಧಾರಣೆ ಮತ್ತು ಹೆರಿಗೆ ಸಮಯದಲ್ಲಿ ಅಪಾಯ ಹೆಚ್ಚಿಸುತ್ತದೆ. ಇದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಬಾಲ್ಯ ವಿವಾಹದಿಂದ ದೈಹಿಕ- ಮಾನಸಿಕ ಆರೋಗ್ಯದ ಮೇಲೆ ಪರಿಣಾಮ: ಡಿಹೆಚ್‌ಓ


ಬಾಲ್ಯ ವಿವಾಹದಿಂದ ದೈಹಿಕ- ಮಾನಸಿಕ ಆರೋಗ್ಯದ ಮೇಲೆ ಪರಿಣಾಮ: ಡಿಹೆಚ್‌ಓ


ಬಾಲ್ಯ ವಿವಾಹದಿಂದ ದೈಹಿಕ- ಮಾನಸಿಕ ಆರೋಗ್ಯದ ಮೇಲೆ ಪರಿಣಾಮ: ಡಿಹೆಚ್‌ಓ


ಬಾಲ್ಯ ವಿವಾಹದಿಂದ ದೈಹಿಕ- ಮಾನಸಿಕ ಆರೋಗ್ಯದ ಮೇಲೆ ಪರಿಣಾಮ: ಡಿಹೆಚ್‌ಓ


ಸಂಡೂರು, 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಾಲ್ಯ ವಿವಾಹವು ಹದಿಹರೆಯದ ಗರ್ಭಧಾರಣೆ ಮತ್ತು ಹೆರಿಗೆ ಸಮಯದಲ್ಲಿ ಅಪಾಯ ಹೆಚ್ಚಿಸುತ್ತದೆ. ಇದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಸಂಡೂರು ತಾಲ್ಲೂಕಿನ ಬಂಡ್ರಿ ಮತ್ತು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಗ್ರಾಮಗಳಿಗೆ ಭೇಟಿ ನೀಡಿ ಗರ್ಭೀಣಿ ತಾಯಂದಿರಿಗೆ 18 ವರ್ಷದೊಳಗೆ ಗರ್ಭ ಧರಿಸಿದರೆ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದ ಅವರು, ಬಾಲ್ಯವಿವಾಹದಿಂದ ಹೆಚ್‌ಐವಿ/ಏಡ್ಸ್ ನಂತಹ ಲೈಂಗಿಕವಾಗಿ ಹರಡುವ ರೋಗಗಳ ಅಪಾಯ ಸಹ ಹೆಚ್ಚಿಸುತ್ತದೆ ಎಂದು ತಿಳಿಸಿದರು.

*ಶಿಕ್ಷಣದ ಮೇಲೆ ಪರಿಣಾಮ:*

ಬಾಲ್ಯ ವಿವಾಹದಿಂದಾಗಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಾಗುತ್ತದೆ, ಇದರಿಂದ ಹುಡುಗಿಯರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದು ಅವರ ಭವಿಷ್ಯದ ಉದ್ಯೋಗ ಮತ್ತು ಆರ್ಥಿಕ ಅವಕಾಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

*ಮಾನಸಿಕ ಆರೋಗ್ಯದ ಮೇಲೆ ಪರಿಣಾಮ:*

ಬಾಲ್ಯ ವಿವಾಹವು ಖಿನ್ನತೆ, ಆತಂಕ ಮತ್ತು ಆಘಾತದ ನಂತರದ ಒತ್ತಡದ ಅಸ್ವಸ್ಥತೆಗಳಂತಹ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದರು.

*ಸಮಾಜದ ಮೇಲೆ ಪರಿಣಾಮ:*

ಬಾಲ್ಯ ವಿವಾಹವು ಲಿಂಗ ಅಸಮಾನತೆ ಮತ್ತು ಬಡತನದ ಚಕ್ರವನ್ನು ಮುಂದುವರೆಸುತ್ತದೆ. ಇದು ದೇಶದ ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ.

*ಪೂರ್ವಜರ ಆಸ್ತಿಯಲ್ಲಿ ಪಾಲು ತಪ್ಪಿಸುವುದು:*

ಗ್ರಾಮೀಣ ಪ್ರದೇಶಗಳಲ್ಲಿ, ಕೆಲವು ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಿದರೆ, ಅವರು ತಮ್ಮ ಆಸ್ತಿಯಲ್ಲಿ ಪಾಲು ಕೇಳುವುದಿಲ್ಲ ಎಂದು ಭಾವಿಸುತ್ತಾರೆ, ಇದು ಸಹ ಬಾಲ್ಯ ವಿವಾಹಕ್ಕೆ ಕಾರಣವಾಗುತ್ತದೆ.

*ಬಾಲ್ಯ ವಿವಾಹ ನಿಷೇಧ ಕಾಯ್ದೆ 2006:*

ಈ ಕಾಯ್ದೆಯು ಹುಡುಗಿಯರಿಗೆ ಕಾನೂನುಬದ್ಧ ವಿವಾಹದ ವಯಸ್ಸನ್ನು 18 ಮತ್ತು ಹುಡುಗರಿಗೆ 21 ಎಂದು ನಿಗದಿಪಡಿಸುತ್ತದೆ. ಇದು ಬಾಲ್ಯ ವಿವಾಹಗಳನ್ನು ಆಚರಿಸುವ ಅಥವಾ ಉತ್ತೇಜಿಸುವವರಿಗೆ ದಂಡ ವಿಧಿಸುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012 ಇದು ವೈವಾಹಿಕ ಸ್ಥಿತಿ ಏನೇ ಇರಲಿ, ಅಪ್ರಾಪ್ತ ವಯಸ್ಕರೊಂದಿಗಿನ ಲೈಂಗಿಕ ಸಂಬAಧವನ್ನು ಶಾಸನಬದ್ಧ ಅತ್ಯಾಚಾರವೆಂದು ಗುರುತಿಸುತ್ತದೆ. ಶಿಕ್ಷಣ ಹಕ್ಕು ಕಾಯ್ದೆ 2009, ಇದು 14 ವರ್ಷದವರೆಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಖಾತ್ರಿಗೊಳಿಸುತ್ತದೆ, ಇದು ಮದುವೆಗಳನ್ನು ವಿಳಂಬಗೊಳಿಸಲು ಸಹಾಯ ಮಾಡುತ್ತದೆ ಎಂದರು.

*ವರದಕ್ಷಿಣೆ ನಿಷೇಧ ಕಾಯ್ದೆ, 1961:*

ಇದು ಬಾಲ್ಯ ವಿವಾಹಗಳಿಗೆ ಉತ್ತೇಜನ ನೀಡುವ ವರದಕ್ಷಿಣೆ ಬೇಡಿಕೆಗಳನ್ನು ಪರಿಹರಿಸುತ್ತದೆ. ಬಾಲ್ಯ ವಿವಾಹ ತಡೆಗೆ ಪ್ರಯತ್ನಗಳು ಬೇಟಿ ಬಚಾವೋ, ಬೇಟಿ ಪಡಾವೋ ಕಾಯ್ದೆಯು ಇದು ಲಿಂಗ ಸಮಾನತೆ ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಸಾಂಕ್ರಾಮಿಕ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಸಂಡೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್, ಆಡಳಿತ ವೈದ್ಯಾಧಿಕಾರಿಗಳು ಸೇರಿದಂತೆ ತಾಯಂದಿರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande