
ಬೆಂಗಳೂರು, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ಒಂದು ಸೈಟ್ ಖರೀದಿಸಲು ಜೀವನ ಪೂರ್ತಿ ಪರದಾಡುವ ಕನ್ನಡಿಗರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯವಿಲ್ಲ. ಆದರೆ ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ವಾಸವಿರುವ ವಲಸಿಗರಿಗೆ ಕಾಂಗ್ರೆಸ್ ಸರ್ಕಾರದಿಂದ ವಸತಿ ಭಾಗ್ಯ ಕಲ್ಪಿಸಲಾಗುತ್ತಿದ್ದೆ ಎಂದು ಜೆಡಿಎಸ್ ಆರೋಪಿಸಿದೆ.
ರಾಜ್ಯದಲ್ಲಿ ಎಷ್ಟೋ ಮಂದಿ ಕನ್ನಡಿಗರು ಸ್ವಂತ ಮನೆ ಇಲ್ಲದೆ, ಬಾಡಿಗೆ ಮನೆಯಲ್ಲಿ ವಾಸವಾಗಿ, ತಿಂಗಳಾದರೇ ಬಾಡಿಗೆ ಕಟ್ಟಲು ದುಡ್ಡಿಲ್ಲದೆ ಹೆಣಗಾಡುತ್ತಿದ್ದಾರೆ. ಇನ್ನೂ ಲೆಕ್ಕವಿಲ್ಲದಷ್ಟು ಮಂದಿ ಬೀದಿ ಬದಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ.
ಇಂತಹವರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಕಾಳಜಿ ಇಲ್ಲ. ಆದರೆ, ಅಕ್ರಮ ವಸಲಿಗರ ಪರ ಕನಿಕರ, ಅನುಕಂಪ ತೋರಿಸುತ್ತಿರುವುದು ವೋಟಿಗಾಗಿನ ಓಲೈಕೆ ರಾಜಕಾರಣವಲ್ಲದೇ ಮತ್ತೇನು ಎಂದು ಪ್ರಶ್ನಿಸಿದೆ.
ಕೇರಳ ಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಸರಕಾರ ಅಕ್ರಮವಾಗಿ ಮನೆ ಕಟ್ಟಿಕೊಂಡವರ ಪರ ನಿಂತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa