
ನವದೆಹಲಿ, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದೆಹಲಿ, ಹಿಂಡನ್ ಹಾಗೂ ಜಮ್ಮು ವಿಮಾನ ನಿಲ್ದಾಣಗಳಲ್ಲಿ ಸೋಮವಾರ ಬೆಳಿಗ್ಗೆ ದಟ್ಟ ಮಂಜು ಆವರಿಸಿರುವುದರಿಂದ ಗೋಚರತೆ ಕುಂಠಿತಗೊಂಡಿದ್ದು, ವಿಮಾನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಸಂಸ್ಥೆ ತನ್ನ ಕೆಲ ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿರುವುದಾಗಿ ತಿಳಿಸಿದೆ.
ಹವಾಮಾನ ಪರಿಸ್ಥಿತಿ ಸುಧಾರಿಸಿದ ನಂತರ ವಿಮಾನ ಸಂಚಾರವನ್ನು ಕ್ರಮೇಣ ಸಹಜ ಸ್ಥಿತಿಗೆ ತರುವುದಾಗಿ ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ. ಜಮ್ಮು ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗುವ ಸಾಧ್ಯತೆಯೂ ಇರುವುದಾಗಿ ಸಂಸ್ಥೆ ಎಚ್ಚರಿಕೆ ನೀಡಿದೆ.
ಇಂಡಿಗೋ ಸಂಸ್ಥೆ ಎಕ್ಸ ಮೂಲಕ ಹೊರಡಿಸಿದ ಪ್ರಯಾಣ ಸಲಹೆಯಲ್ಲಿ, ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು
http://bit.ly/3ZWAQXd
ಲಿಂಕ್ ಮೂಲಕ ಪರಿಶೀಲಿಸಬೇಕೆಂದು ಮನವಿ ಮಾಡಿದೆ.
ವಿಮಾನ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿರುವ ಪ್ರಯಾಣಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಮರು ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದ್ದು, ಮರುಪಾವತಿಗಾಗಿ
https://goindigo.in/plan-b.html
ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಯಾಣಿಕರ ಸಹಾಯಕ್ಕಾಗಿ ವಿಮಾನ ನಿಲ್ದಾಣಗಳ ಟರ್ಮಿನಲ್‌ಗಳಲ್ಲಿ ಇಂಡಿಗೋ ಸಹಾಯ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa