ಜ.01 ರಂದು ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಹಾಸನ, 29 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ ಹಾಸನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಸನ ಇವರ ಸಹಯೋಗದಲ್ಲಿ ವಿಶ್ವಕರ್ಮ ಶ್ರೀ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜ.01 ರಂದು ಬೆಳಗ್ಗೆ 11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಮಾಜಿ ಪ್ರಧಾನ ಮಂತ್ರಿ ಹಾ
ಜ.01 ರಂದು ಜಕಣಾಚಾರಿ ಸಂಸ್ಮರಣಾ ದಿನಾಚರಣೆ


ಹಾಸನ, 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ ಹಾಸನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಸನ ಇವರ ಸಹಯೋಗದಲ್ಲಿ ವಿಶ್ವಕರ್ಮ ಶ್ರೀ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜ.01 ರಂದು ಬೆಳಗ್ಗೆ 11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.

ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ ಅವರು ಘನ ಉಪಸ್ಥಿತಿಯನ್ನು ವಹಿಸಲಿದ್ದಾರೆ. ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕರು ಹಾಗೂ ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ ಕೆ.ಎಂ ಶಿವಲಿಂಗೇಗೌಡ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಹೆಚ್.ಡಿ ರೇವಣ್ಣ, ಸಿ.ಎನ್ ಬಾಲಕೃಷ್ಣ, ಎ.ಮಂಜು, ಹೆಚ್.ಕೆ ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಸೂರಜ್ ರೇವಣ್ಣ ಭಾಗವಹಿಸಲಿದ್ದಾರೆ. ಹಾಸನ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ವಿಜಯ್ ಅಂಗಡಿ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande