ವಸತಿ ನಿಲಯಗಳ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದ ಸಚಿವ ಖಂಡ್ರೆ
ಬೀದರ್, 29 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ನಗರದಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವಿತ ಸ್ಥಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ನಡೆಸಿದರು. ಬಾಲಕಿಯರ ಶಿಕ್ಷಣಕ್ಕೆ ಸುರ
Visit


ಬೀದರ್, 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ನಗರದಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವಿತ ಸ್ಥಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ನಡೆಸಿದರು.

ಬಾಲಕಿಯರ ಶಿಕ್ಷಣಕ್ಕೆ ಸುರಕ್ಷಿತ ಹಾಗೂ ಸುಸಜ್ಜಿತ ವಸತಿ ಸೌಲಭ್ಯಗಳು ಅತ್ಯಂತ ಅಗತ್ಯವಾಗಿದ್ದು, ಗುಣಮಟ್ಟದ ನಿರ್ಮಾಣ, ಮೂಲಸೌಕರ್ಯ, ಸ್ವಚ್ಛತೆ ಮತ್ತು ಭದ್ರತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವಸತಿ ನಿಲಯಗಳ ನಿರ್ಮಾಣದಿಂದ ಭಾಲ್ಕಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಬಾಲಕಿಯರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande