

ಬಳ್ಳಾರಿ, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಯುಗದ ಕವಿ, ಜಗದ ಕವಿ, ರಾಷ್ಟ್ರಕವಿ, ರಸಋಷಿ, ಕರ್ನಾಟಕ ರತ್ನ, ಕನ್ನಡದ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ಪುರಸ್ಕøತರಾದ ಕುವೆಂಪುರವರ ಸಾಹಿತ್ಯವನ್ನು ಓದುವಾಗ ಸಾಹಿತ್ಯದ ವಸ್ತು ಓದುಗರನ್ನು ತನ್ನಲ್ಲಿ ಸೆಳೆದುಕೊಳ್ಳುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿರುವ ಸಿದ್ದರಾಮ ಕಲ್ಮಠ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯ ಪಾರ್ವತಿ ನಗರದಲ್ಲಿ ಇರುವ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾ ಘಟಕ ಏರ್ಪಡಿಸಿದ್ದ ಕುವೆಂಪು ಅವರ 121ನೇ ಜಯಂತಿಯನ್ನು ಉದ್ಘಾಟಿಸಿ, ಕುವೆಂಪು ಅವರ `ಮಲೆಗಳಲ್ಲಿ ಮದುವೆಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ' ಕಾದಂಬರಿಗಳು ಮಲೆನಾಡಿನ ಸೊಬಗನ್ನು ಮತ್ತು ಬದುಕನ್ನು ಕಣ್ಣ ಮುಂದೆ ತೆರೆದಿಡುತ್ತವೆ. ಇಂಥಹಾ ಕಥಾ ವಸ್ತುಗಳು ಮತ್ತು ಬರಹದ ಶೈಲಿಯಿಂದಲೇ ಅವರು ರಾಷ್ಟ್ರಕವಿಯಾಗಿದ್ದಾರೆ ಎಂದರು.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರಾಗಿರುವ ಕೆ. ರಾಜಶೇಖರ್ (ಕುರಿಹಟ್ಟಿ ರಾಜಣ್ಣ) ಅವರು, ಕನ್ನಡ ನಾಡು, ನುಡಿ ಮತ್ತು ನೆಲ-ಜಲಕ್ಕೆ ತನ್ನದೇ ಆದ ಮಹತ್ವವಿದೆ. ನೈಸರ್ಗಿಕವಾದ ಮಹತ್ವಕ್ಕೆ ಸಾಹಿತ್ಯದ ಮೂಲಕ ರಾಷ್ಟ್ರಕವಿ ಕುವೆಂಪು ಅವರು ವಿಶ್ವಮಾನವರಾಗಿದ್ದಾರೆ ಎಂದರು.
ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯ ಗುಡಿಗಂಟೆ ಹನುಮಂತ, ನಾಗರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್