
ವಿಜಯಪುರ, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಔದ್ರಾಮ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ಡಾ.ಔದ್ರಾಮ ಅವರು 2004ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು, ಇವರು ಈ ಹಿಂದೆ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಯಾಗಿ,ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande