ಸರಗಳ್ಳತನ ; ಇಬ್ಬರು ಆರೋಪಿಗಳ ಬಂಧನ
ವಿಜಯಪುರ, 29 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸರಗಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಸೀಫ್ ಜಮಾದಾರ್ ಹಾಗೂ ರಿಹಾನ್ ಮಣಿಯಾರ್ ಎಂದು ಗುರುತಿಸಲಾಗಿದೆ. ಇತ್ತೀಚಿಗಷ
ಬಂಧನ


ವಿಜಯಪುರ, 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸರಗಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಆಸೀಫ್ ಜಮಾದಾರ್ ಹಾಗೂ ರಿಹಾನ್ ಮಣಿಯಾರ್ ಎಂದು ಗುರುತಿಸಲಾಗಿದೆ.

ಇತ್ತೀಚಿಗಷ್ಟೇ ವಿಜಯಪುರ ನಗರದ ಮಹಿಳೆಯೊಬ್ಬರು ದಿವಟಗೇರಿ ಬಡವಾಣೆಯಲ್ಲಿನ ಅಂಗಡಿಗೆ ತೆರಳಿದ್ದರು. ಆಗ ಆರೋಪಿಗಳಿಬ್ಬರು ಏಕಾಏಕಿ ಕಲಾವತಿ ಮೇಲೆ ಹಲ್ಲೆಗೈದು, ಕಿವಿ ಕತ್ತರಿಸಿದ್ದರು. ಬಳಿಕ ಕಿವಿಯಲ್ಲಿದ್ದ ಓಲೆ ಹಾಗೂ ಕತ್ತಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು.

ಕೇವಲ 24 ಗಂಟೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande