ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಹೊಸಪೇಟೆ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನಯಡಿ(ಎಸ್‍ಎಸ್‍ಪಿ) ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ
ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ


ಹೊಸಪೇಟೆ, 03 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನಯಡಿ(ಎಸ್‍ಎಸ್‍ಪಿ) ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡಪ್ಪ ಜಿಗಳಿಕೊಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪೋರ್ಟಲ್ https://ssp.postmatric.karnataka.gov.in/ ಅನ್‍ಲೈನ್ ಮೂಲಕ ಜನವರಿ.31 ರೊಳಗೆ ಅರ್ಜಿ ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಆಯಾ ಶಾಲೆಯ ಮುಖ್ಯೋಪಾಧ್ಯಾರಿಗೆ ಸಲ್ಲಿಸಬೇಕು.

ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್‍ಪಿಸಿಐ ಮ್ಯಾಪ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಒಂದನೇಯ ತರಗತಿ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಹಿಂದಿನ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದವರನ್ನು ಆಟೋ ರಿನಿವಲ್ ಎಂದು ಪರಗಣಿಸುವುದರಿಂದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಹಿಂದಿನ ವರ್ಷ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದವರು ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande