ಬಳ್ಳಾರಿ ಮಹಾನಗರ ಪಾಲಿಕೆ : ಡಿ.09 ರಂದು ಆಯವ್ಯಯ ಪೂರ್ವಭಾವಿ ಸಭೆ
ಬಳ್ಳಾರಿ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ 2026-2027 ನೇ ಸಾಲಿನ ಆಯ-ವ್ಯಯ ಪತ್ರದ ತಯಾರಿಕೆಯ ಪೂರ್ವಭಾವಿ ಸಭೆಯನ್ನು ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಆಯುಕ್ತರ ನೇತೃತ್ವದಲ್ಲಿ ಡಿಸೆಂಬರ್ 9 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಹಾನಗರ ಪಾಲಿಕೆಯ ಶ್ರೀ ಕೃಷ್ಣದೇವ
ಬಳ್ಳಾರಿ ಮಹಾನಗರ ಪಾಲಿಕೆ : ಡಿ.09 ರಂದು ಆಯವ್ಯಯ ಪೂರ್ವಭಾವಿ ಸಭೆ


ಬಳ್ಳಾರಿ, 03 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ 2026-2027 ನೇ ಸಾಲಿನ ಆಯ-ವ್ಯಯ ಪತ್ರದ ತಯಾರಿಕೆಯ ಪೂರ್ವಭಾವಿ ಸಭೆಯನ್ನು ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಆಯುಕ್ತರ ನೇತೃತ್ವದಲ್ಲಿ ಡಿಸೆಂಬರ್ 9 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಹಾನಗರ ಪಾಲಿಕೆಯ ಶ್ರೀ ಕೃಷ್ಣದೇವರಾಯ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ನಗರದ ನಾಗರಿಕರು, ಸಂಪನ್ಮೂಲ ವ್ಯಕ್ತಿಗಳು, ನೋಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘಗಳು, ನೋಂದಾಯಿತ ಸರ್ಕಾರೇತರ ಸಂಘ-ಸAಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘ/ಸ0ಸ್ಥೆಗಳ ಪ್ರತಿನಿಧಿಗಳು ಆಗಮಿಸಿ ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಮುಂಗಡ ಆಯ-ವ್ಯಯ ತಯಾರಿಕೆಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡಬಹುದು.

ಸಭೆಯು ಸಾಮಾನ್ಯ ಸಾರ್ವಜನಿಕ ಕುಂದು ಕೊರತೆ ಸಭೆಯಾಗಿರುವುದಿಲ್ಲ. ಬದಲಾಗಿ 2026-27ನೇ ಸಾಲಿಗೆ ನಗರದ ಅಭಿವೃದ್ಧಿಗೆ ಪೂರಕವಾಗಿ ಆಯ-ವ್ಯಯದಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯಸೂಚಿಯನ್ನು ತಯಾರಿಸುವ ಸಭೆಯಾಗಿದ್ದು, ಸಾರ್ವಜನಿಕರು ನವೀನ, ಅಭಿವೃದ್ಧಿ ಮಾದರಿ, ಸಂಪನ್ಮೂಲ ಕ್ರೋಢಿಕರಣ ಅಳವಡಿಸಿಕೊಳ್ಳುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande