
ವಿಜಯಪುರ, 03 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟಿರುವವರನ್ನು ವಿಶ್ವನಾಥ ಕಂಬಾರ (17), ಗಣೇಶ ಅರಳಿಮಟ್ಟಿ (20), ಪ್ರವೀಣ್ ಶೇಡಬಾಳ (22), ಪ್ರಜ್ವಲ್ ಶೇಡಬಾಳ (17) ಎಂದು ಗುರುತಿಸಲಾಗಿದೆ.
ನಿನ್ನೆ ಮಧ್ಯರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಕಬ್ಬು ತುಂಬಿ ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ರಸ್ತೆ ಬದಿ ನಿಂತಿತ್ತು. ಅತಿ ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟ್ರ್ಯಾಕ್ಟರ್ ಕೆಳಗೆ ಸಿಲುಕಿಕೊಂಡಿತ್ತು. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಕಾರಿನ ಒಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande