ವಿಕಲಚೇತನ ಮಕ್ಕಳು ದೇವರ ಸಮಾನ : ಬಸವರಾಜ ಹೊರಟ್ಟಿ
ಹುಬ್ಬಳ್ಳಿ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಕಲಚೇತನ ಮಕ್ಕಳು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ. ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ವಿಕಲಚೇತನ ಮಕ್ಕಳು ದೇವರ ಸಮಾನರು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಹುಬ್ಬಳ್ಳಿ ಇಂದಿರಾ ಗಾಜಿನ ಮನೆಯಲ್ಲಿ
Horatti


ಹುಬ್ಬಳ್ಳಿ, 03 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಕಲಚೇತನ ಮಕ್ಕಳು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ. ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ವಿಕಲಚೇತನ ಮಕ್ಕಳು ದೇವರ ಸಮಾನರು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಹುಬ್ಬಳ್ಳಿ ಇಂದಿರಾ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ನಾನು ವೈಯಕ್ತಿಕವಾಗಿ ಸುಮಾರು 156 ತ್ರಿಚಕ್ರ ಸೈಕಲ್ ಗಳನ್ನು ವಿತರಣೆ ಮಾಡಿದ್ದೇನೆ. ಸರ್ಕಾರ ವಿಕಲಚೇತನ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅವರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಅಲ್ಲದೇ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ವಿಕಲಚೇತನ ಮಕ್ಕಳ ವಿಷಯದಲ್ಲಿ ಯಾವುದೇ ರೀತಿಯಲ್ಲಿ ಮೀನ ಮೇಷ ಮಾಡುವುದಿಲ್ಲ. ಸರ್ಕಾರದ ವಿವಿಧ ಯೋಜನೆಗಳ ಮೂಲಕ ವಿಕಲಚೇತನರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ವಿಕಲಚೇತನರ ಕುಂದುಕೊರತೆಗಳನ್ನು ಸರ್ಕಾರದ ಮಟ್ಟದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಅವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande