ಡಾ. ಶಾಲ್ಮೋನ್ ಚೋಪಡೆಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್
ವಿಜಯಪುರ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಅವರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್-2025 ಲಭಿಸಿದೆ. ಕರ್ನಾಟಕ ನ್ಯೂಸಪೇಪರ್ಸ್ ಅಸೋಸಿಯೇಶನ್ ಮತ್ತು
ಅವಾರ್ಡ್


ವಿಜಯಪುರ, 03 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಅವರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್-2025 ಲಭಿಸಿದೆ.

ಕರ್ನಾಟಕ ನ್ಯೂಸಪೇಪರ್ಸ್ ಅಸೋಸಿಯೇಶನ್ ಮತ್ತು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನೀಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನಹಾಲ್ ನಲ್ಲಿ ನವೆಂಬರ್ 27 ರಂದು ಗುರುವಾರ ನಡೆದ ಕಾರ್ಯಕ್ರಮದಲ್ಲಿ ಗಣ್ಯರಾದ ಡಾ. ಲವಿನಾ ಜನಾರ್ಧನ, ಡಾ. ಚಂದ್ರಶೇಖರ ಶೆಟ್ಟಿ, ಡಾ. ಸಚ್ಚಿದಾನಂದ ಅವರು ಡಾ. ಶಾಲಮೊನ್ ಚೊಪಡೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಅಲ್ಲದೇ, ಈ ಪ್ರಶಸ್ತಿಯೊಂದಿಗೆ ಈ ಪ್ರಶಸ್ತಿಯೊಂದಿಗೆ ಟ್ರೋಫಿ, ಗೋಲ್ಡ್ ಪ್ಲೇಟೆಡ್ ಪದಕ ಹಾಗೂ ಗೌರವ ಪತ್ರವನ್ನು ಪ್ರದಾನ ಮಾಡಲಾಯಿತು.

ನರ್ಸಿಂಗ್ ವೃತ್ತಿಯಲ್ಲಿ ಸಲ್ಲಿಸಿದ ಅಮೂಲ್ಯ ಸೇವೆ, ಸಮಾಜಮುಖಿ ಚಟುವಟಿಕೆಗಳು ಹಾಗೂ ವೃತ್ತಿ ಉತ್ತೇಜನಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಪ್ರೊ. ಶಾಲ್ಮೋನ್ ಚೋಪಡೆ ಅವರಿಗೆ ಈ ರಾಷ್ಟ್ರಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಾ. ಶಾಲ್ಮೋನ್ ಚೋಪಡೆ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಸಂಸ್ಥೆಯ ಪದಾಧಿಕಾರಿಗಳು, ಸಂಸ್ಥೆಯ ಮುಖ್ಯ ಸಲಹೆಗಾರ ಡಾ. ಆರ್. ವಿ. ಕುಲಕರ್ಣಿ, ಕಾಲೇಜಿನ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನ ಸಲ್ಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande