
ನವದೆಹಲಿ, 03 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಂಸತ್ತಿನ ಚಳಿಗಾಲದ ಅಧಿವೇಶನದ ಮೂರನೇ ದಿನ ಪ್ರಾರಂಭಕ್ಕೂ ಮೊದಲು ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟದ ನಾಯಕರು ಮೂರು ಹೊಸ ಕಾರ್ಮಿಕ ಕಾನೂನುಗಳ ವಿರುದ್ಧ ಸಂಸತ್ ಭವನದ ಮಕರ ಗೇಟ್ ಬಳಿ ಧರಣಿ ನಡೆಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಗೌರವ್ ಗೊಗೊಯ್, ಪ್ರಮೋದ್ ತಿವಾರಿ ಸೇರಿದಂತೆ ಹಲವು ಪಕ್ಷಗಳ ಹಿರಿಯ ನಾಯಕರು ಭಾಗವಹಿಸಿದರು.
“ಕಾರ್ಮಿಕರ ಹಕ್ಕುಗಳನ್ನು ಉಳಿಸಿ”, “ಕಾರ್ಪೊರೇಟ್ ಜಂಗಲ್ ರಾಜ್ ಗೆ ಬೇಡ”, “ಕಾರ್ಮಿಕರಿಗೆ ನ್ಯಾಯ”, “ಕಾರ್ಮಿಕ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಿ” ಎಂಬ ಘೋಷಣೆಗಳನ್ನು ಹಾಕಿದರು.
ಹೊಸ ಕಾರ್ಮಿಕ ಕಾನೂನುಗಳು ಕಾರ್ಮಿಕರ ಹಕ್ಕು, ಸುರಕ್ಷತೆ ಮತ್ತು ಸಾಮಾಜಿಕ ಭದ್ರತೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಇಂಡಿ ಮೈತ್ರಿಕೂಟ ಆರೋಪಿಸಿ, ಕಾನೂನುಗಳನ್ನು ರದ್ದುಪಡಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa