
ಹೊಸಪೇಟೆ, 03 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಡಿಸೆಂಬರ್ 07ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯುವ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಕೇದ್ರದ ಸುತ್ತಲೂ 200 ಮೀಟರ್ ಆವರಣದಲ್ಲಿ ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಅನಿಧಿಕೃತ ವ್ಯಕ್ತಿಗಳು ಮತ್ತು ಗುಂಪುಗಳಿಗೆ ಪ್ರವೇಶವಿರುವುದಿಲ್ಲ ಮತ್ತು ಆದೇಶವನ್ನು ಉಲ್ಲಂಘಿಸಿ ಪ್ರವೇಶಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ ಎಂದು ಆದೇಶಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್