
ಮಂಗಳೂರು, 03 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೇರಳದ ಶಿವಗಿರಿ ಮಠ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ, ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವತಿಯಿಂದ ಇಂದು ಮಂಗಳೂರಿನಲ್ಲಿ “ಗುರು–ಗಾಂಧಿ” ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಮಾಜದ ಅಸಮಾನತೆ ಮತ್ತು ಶೋಷಣೆಯ ವಿರುದ್ಧ ನಾರಾಯಣ ಗುರು ನೀಡಿದ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಾನವೀಯ ಸಂದೇಶ ಇಂದಿಗೂ ಪ್ರಸ್ತುತವಿದೆ ಎಂದು ಹೇಳಿದರು. ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬೋಧಿಸಿದ ಗುರುಗಳ ಉಪದೇಶಗಳು ಕರಾವಳಿ ಪ್ರದೇಶಕ್ಕೆ ಮಾತ್ರ ಸೀಮಿತವಾಗದೇ, ದೇಶವ್ಯಾಪಿ ಚಳವಳಿಯಾಗಿ ರೂಪುಗೊಳ್ಳಬೇಕೆಂದು ಅಭಿಪ್ರಾಯಪಟ್ಟರು.
“ಬುದ್ಧ, ಬಸವ, ಅಂಬೇಡ್ಕರ್ ಮತ್ತು ನಾರಾಯಣ ಗುರುಗಳಂತಹ ಮಹಾನ್ ಚಿಂತಕರ ತತ್ತ್ವಗಳು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಹರಡಿ, ಸಮಾಜ ಪರಿವರ್ತನೆಗೆ ದಾರಿ ಮಾಡಿಕೊಡಬೇಕು,” ಎಂದು ಜಾರಕಿಹೊಳಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa