
ಮಂಗಳೂರು, 03 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಹೈಕಮಾಂಡ್ ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa