ತಿರುವನಂತಪುರಂಗೆ ರಾಷ್ಟ್ರಪತಿ ಮುರ್ಮು
ನವದೆಹಲಿ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮತ್ತು ನಾಳೆ (ಡಿಸೆಂಬರ್ 3–4) ತಿರುವನಂತಪುರಂಗೆ ಭೇಟಿ ನೀಡಲಿದ್ದಾರೆ. ನೌಕಾಪಡೆಯ ದಿನಾಚರಣೆಯ ಅಂಗವಾಗಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂರು ಸೇನೆಗಳ ಸರ್ವೋ
President


ನವದೆಹಲಿ, 03 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮತ್ತು ನಾಳೆ (ಡಿಸೆಂಬರ್ 3–4) ತಿರುವನಂತಪುರಂಗೆ ಭೇಟಿ ನೀಡಲಿದ್ದಾರೆ. ನೌಕಾಪಡೆಯ ದಿನಾಚರಣೆಯ ಅಂಗವಾಗಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮೂರು ಸೇನೆಗಳ ಸರ್ವೋಚ್ಚ ಮುಖ್ಯಸ್ಥರಾಗಿರುವ ರಾಷ್ಟ್ರಪತಿ ಮುರ್ಮು ಅವರು ನೌಕಾಪಡೆಯ ಯುದ್ಧ ಸಾಮರ್ಥ್ಯ, ಆಧುನಿಕ ತಂತ್ರಜ್ಞಾನ ಮತ್ತು ಕಾರ್ಯಾಚರಣಾ ಕೌಶಲ್ಯಗಳ ಪ್ರದರ್ಶನ ವೀಕ್ಷಿಸಲಿದ್ದಾರೆ.

ನಿನ್ನೆ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು “ಭಾರತೀಯ ಕಡಲ ಸಿದ್ಧಾಂತ” ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಪ್ರಾದೇಶಿಕ ಕಡಲ ಪ್ರಭಾವವನ್ನು ಬಲಪಡಿಸುವುದು ಇದರ ಉದ್ದೇಶ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande