ವಿಕಲಚೇತನರಿಗೆ ಆತ್ಮಶಕ್ತಿಯೇ ದೊಡ್ಡ ಶಕ್ತಿ : ಶಾಸಕ ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಕಲಚೇತನರಿಗೆ ಆತ್ಮಶಕ್ತಿಯೇ ದೊಡ್ಡ ಶಕ್ತಿಯಾಗಿದೆ. ಅವರಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸಗಳಾಗಬೇಕು. ವಿಕಲಚೇತನರು ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಉನ್ನತ ಸಾಧನೆಗೈದಿದ್ದಾರೆ. ಸಾಧನೆಗೆ ದೈಹಿಕ ನ್ಯೂನ್ಯತೆ ಎಂದಿಗೂ ಅಡ್ಡಿಯಾಗುವುದಿಲ್ಲ ಎಂದ
Mahesh


ಹುಬ್ಬಳ್ಳಿ, 03 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಕಲಚೇತನರಿಗೆ ಆತ್ಮಶಕ್ತಿಯೇ ದೊಡ್ಡ ಶಕ್ತಿಯಾಗಿದೆ. ಅವರಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸಗಳಾಗಬೇಕು. ವಿಕಲಚೇತನರು ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಉನ್ನತ ಸಾಧನೆಗೈದಿದ್ದಾರೆ. ಸಾಧನೆಗೆ ದೈಹಿಕ ನ್ಯೂನ್ಯತೆ ಎಂದಿಗೂ ಅಡ್ಡಿಯಾಗುವುದಿಲ್ಲ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿ ಇಂದಿರಾ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ತ್ರಿಚಕ್ರ ವಾಹನ ವಿತರಿಸುವ ಕೆಲಸಗಳನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ರೂ.75 ಲಕ್ಷ ವೆಚ್ಚದಲ್ಲಿ 38 ಹೊಸ ವಾಹನಗಳನ್ನು ವಿಕಲಚೇತನರಿಗೆ ವಿತರಿಸಲಾಗುತ್ತಿದೆ. ವಿಕಲಚೇತನರಿಗಾಗಿ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದೆ. ಸುಮಾರು ರೂ. 2 ಕೋಟಿ ವೆಚ್ಚದಲ್ಲಿ ಕಿಮ್ಸಗೆ ವಿಶೇಷಚೇತನರಿಗಾಗಿ ಸಾಧನ ಸಲಕರಣೆಗಳನ್ನು ಒದಗಿಸಲಾಗಿದೆ. ಅಲ್ಲದೇ ರೂ.23 ಲಕ್ಷ ವೆಚ್ಚದಲ್ಲಿ ವಿಕಲಚೇತನರಿಗೆ ವಿಶೇಷ ಸಾಮಗ್ರಿಗಳನ್ನು ಇಂದು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande