
ಮಂಗಳೂರು, 3 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಲ್ಲ, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರ ಶಿಲಾನ್ಯಾಸ ಹಾಗೂ ಪೇಸ್ ಟ್ರೈಡ್ ಪಾರ್ಕ್, ಸ್ಪೋರ್ಟ್ಸ್ ಅರೇನಾ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಪೇಸ್ ಶಿಕ್ಷಣ ಸಂಸ್ಥೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಅವರು, ಸಂಸ್ಥಾಪಕ ಡಾ. ಪಿ.ಎ. ಇಬ್ರಾಹಿಂ ಅವರ ದೂರದೃಷ್ಟಿಯಿಂದ ದೇಶ–ವಿದೇಶಗಳಲ್ಲಿ 36,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂದು ಶ್ಲಾಘಿಸಿದರು.
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ ಎಂದು ಎಚ್ಚರಿಸಿದ ಮುಖ್ಯಮಂತ್ರಿ, ಆಧುನಿಕ ವಿದ್ಯೆಯ ಜೊತೆಗೆ ವೈಜ್ಞಾನಿಕತೆ–ವೈಚಾರಿಕತೆ ಬೆಳೆಸಿದಾಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa