
ಹೊಸಪೇಟೆ, 03 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವವಿಖ್ಯಾತ ಹಂಪಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ಸವ ಡಿ.4 ರಿಂದ ಡಿ.6 ರವೆರೆಗೆ ಜರುಗಲಿದೆ ಎಂದು ಶ್ರೀವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.
ಶ್ರೀಹಂಪಿ ವಿರೂಪಾಕ್ಷ ವಿದ್ಯಾರಣ್ಯ ಸಂಸ್ಥಾನದ ಪೀಠಾಧಿಪರಿಗಳಾದ ಶ್ರೀವಿದ್ಯಾರಣ್ಯ ಭಾರತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಡಿ.4 ರಂದು ಗುರುವಾರ ರಾತ್ರಿ.8 ಗಂಟೆಗೆ ಮನ್ಮುಖ ತೀರ್ಥದಲ್ಲಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಜರುಗಲಿದೆ. ಹಾಗೂ ಡಿ.6 ರಂದು ರಾತ್ರಿ 9 ಗಂಟೆಗೆ ಶ್ರೀಚಕ್ರ ತೀರ್ಥ ಕೋದಂಡರಾಮಸ್ವಾಮಿಯ ಸನ್ನಿಧಿಯಲ್ಲಿ ಫಲಪೂಜಾ ಮಹೋತ್ಸವ ಜರುಗಲಿದೆ.
ಡಿ.4 ರಿಂದ ಡಿ.7 ರವೆರೆಗೆ ಶ್ರೀವಿರೂಪಾಕ್ಷೇಶ್ವರ ಸ್ವಾಮಿಯವರಿಗೆ ವಿಜಯನಗರದ ಅರಸರಾದ ಶ್ರೀಕೃಷ್ಣದೇವರಾಯರು ಸಮರ್ಪಿಸಿದ ನವರತ್ನ ಖಚಿತವಾದ ಸುವರ್ಣಮುಖ ಕಮಲದೊಂದಿಗೆ ಅಲಂಕರಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಶ್ರೀಪುಣ್ಯಕ್ಷೇತ್ರಕ್ಕೆ ಆಗಮಿಸಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿಯ ಸರ್ವಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಶ್ರೀಭುವೆನೇಶ್ವರಿ ಸಹಿತ ಶ್ರೀಪಂಪಾ ವಿರೂಪಾಕ್ಷೇಶ್ವರ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಕೋರಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮತ್ತು ಹಿಂದೂ, ಧಾರ್ಮಿಕ ದತ್ತಿಗಳ ಇಲಾಖೆ ಸಹಾಯಕ ಆಯುಕ್ತರಾದ ಸವಿತಾ.ಹೆಚ್ ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್