ಹುಬ್ಬಳ್ಳಿ ಬಳಿ ಬಸ್–ಬೈಕ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಗುತ್ತಿ–ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಹೆದ್ದಾರಿಯಲ್
Accident


ಹುಬ್ಬಳ್ಳಿ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಗುತ್ತಿ–ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ.

ಹೆದ್ದಾರಿಯಲ್ಲಿ ಓವರ್‌ಟೇಕ್ ಮಾಡಲು ಪ್ರಯತ್ನಿಸಿದ ಸಾರಿಗೆ ಬಸ್ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿದ್ದವರು , ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರ ಸ್ಥಿತಿ ಗಂಭೀರವಾಗಿರುವುದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ತನಿಖೆಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ.

ಮಾಹಿತಿ ಪಡೆದ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮೃತರ ಗುರುತು ಹಾಗೂ ವಿವರಗಳನ್ನು ಕಲೆಹಾಕುವ ಕಾರ್ಯ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande