
ಗದಗ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್: ಗದಗ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿಂದು ಜಿಲ್ಲಾ ಕಣ್ಗಾವಲು ಸಮಿತಿ ಸಭೆಯು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಜಿಲ್ಲೆಯಲ್ಲಿ ನಾಯಿಕಡಿತದ ಪ್ರಕರಣಗಳು ಒಂದು ವೇಳೆ ದಾಖಲಾಗದೇ ಇದ್ದಲ್ಲಿ ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖಾಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಬೇಕು. ಇದರ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಾಹಿತಿ ಒದಗಿಸಬೇಕು. ನೀರಿನ ಮಾದರಿ ವಿಶ್ಲೇಷಣೆಗೆ ಸಂಬಂಧಿಸಿದಂತೆ ಕೇಂದ್ರೀಯ ಅಂತರ್ಜಲ ಮಂಡಳಿ ನೀರಿನ ಮಾದರಿ ರಾಸಾಯನಿಕ ವಿಶ್ಲೇಷಣೆ ಮಾಡಿದ್ದು ಕೆಲವೊಂದು ಕಡೆ ಅರ್ಸೆನಿಕ್ ಯುರೇನಿಯಂ ಪ್ರಮಾಣ ಪರಿಮಿತಿಗಿಂತ ಹೆಚ್ಚಾಗಿರುವುದು ಕಂಡು ಬಂದಿರುತ್ತದೆ. ಅಂತಹ ಸ್ಥಳಗಳನ್ನು ಗುರುತಿಸಿ ಮಾದರಿಗಳನ್ನು ಶೇಖರಿಸಿ ಪರೀಕ್ಷಿಗೊಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ ಅವರು ಮಾತನಾಡಿ ಜಿಲ್ಲೆಯಲ್ಲಿ ಜನೆವರಿ 2025 ರಿಂದ ನವೆಂಬರ್ 2025 ರವರೆಗೆ 3929 ಕರುಳು ಬೇನೆ , 3774 ಟೈಫಾಯಿಡ್, 47- ಹೆಪಟೈಟೀಸ್ – ಎ , 118 ಡೆಂಘಿ ಹಾಗೂ 03 ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಜನೆವರಿ 2025 ರಿಂದ ನವೆಂಬರ್ 2025 ರವರೆಗೆ ಒಟ್ಟು 326804 ಸಂಶಯಾಸ್ಪದ ಮಲೇರಿಯಾ ರಕ್ತದ ಲೇಪನಗಳನ್ನು ಸಂಗ್ರಹಿಸಿದ್ದು, ಅದರಲ್ಲಿ 7 ಖಚಿತ ಪ್ರಕರಣಗಳು ವರದಿಯಾಗಿದ್ದು ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದೆ. ರಾಷ್ಟಿçÃಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ವಿಶ್ವ ರೇಬಿಸ್ ದಿನಾಚರಣೆಯನ್ನು ಮುಂಡರಗಿಯ ಶ್ರೀ ಜಗದ್ಗುರು ತೋಂಟದಾರ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 3 ರಂದು ಆಚರಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೂ 9008 ನಾಯಿಕಡಿತ ಹಾಗೂ 1541 ಇತರೆ ಪ್ರಾಣಿಗಳ ಕಡಿತ ವರದಿಯಾಗಿವೆ ಎಂದು ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ ತಿಳಿಸಿದರು.
ಸಭೆಯಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ, ಇಲಿ ಜ್ವರ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ಕಾರ್ಯಕ್ರಮ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ನೀಲಗುಂದ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ.ಭಜಂತ್ರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್.ಬುರುಡಿ, ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಡಾ.ಅರುಂಧತಿ ಕುಲಕರ್ಣಿ, ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP