ಆನ್‌ಲೈನ್ ಮೂಲಕ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಗದಗ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2025-26 ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗ
ಫೋಟೋ


ಗದಗ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2025-26 ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಸೇವಾಸಿಂಧು ಆನ್‌ಲೈನ್ ಮುಖಾಂತರ ಡಿಸೆಂಬರ್ 1 ರಿಂದ 30 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿತ್ತು.

ಸದರ ಅವಧಿಯನ್ನು 10 ದಿನಗಳವರೆಗೆ ವಿಸ್ತರಿಸಿ ಜನೆವರಿ 9 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande