ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಹಬ್ಬ : ಬಸವರಾಜ ಬಳ್ಳಾರಿ
ಗದಗ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗದಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಹಯೋಗದಲ್ಲಿ 2025-26ನೇ ಸಾಲಿನ “ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಹಬ್ಬ” ಗದಗ ಜಿಲ್ಲಾ ಮಟ್ಟ
ಫೋಟೋ


ಗದಗ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗದಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಹಯೋಗದಲ್ಲಿ 2025-26ನೇ ಸಾಲಿನ “ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಹಬ್ಬ” ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜನೇವ್ಹರಿ 3, 4 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ಬಸವರಾಜ ವ್ಹಿ. ಬಳ್ಳಾರಿ ಹೇಳಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ ಪಾಟೀಲ ನೆರವೇರಿಸಲಿದ್ದು, ಘನ ಉಪಸ್ಥಿತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಲೀಂ ಅಹ್ಮದ್, ಪಿ ಸಿ ಗದ್ದಿಗೌಡರ್, ಜಿ. ಎಸ್ ಪಾಟೀಲ್, ಸಿ. ಸಿ ಪಾಟೀಲ್, ಡಾ. ಚಂದ್ರು ಲಮಾಣಿ, ಎಸ್‌. ವಿ ಸಂಕನೂರ, ಡಿ. ಆರ್ ಪಾಟೀಲ್ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದ ಪ್ರತಿಯೋಬ್ಬ ಸರ್ಕಾರಿ ನೌಕರರಿಗೆ ಕ್ಯಾಲೆಂಡರ್ ತಲುಪಿಸುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ಯಾಲೆಂಡರ್ ವಿತರಿಸುವ ಕೆಲಸ ಈಗಾಗಲೇ ನಡೆಯುತ್ತಿದೆ. ಜಿಲ್ಲಾ ಹಂತದಲ್ಲಿ ನೌಕರರಿಗೆ ಆರೋಗ್ಯ ತಪಾಸಣೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಸಹಕಾರದಿಂದ ಕ್ರೀಡಾಕೂಟ ನಡೆಯಲಿವೆ. ರಾಜ್ಯಾಧ್ಯಂತ ಎರಡೂವರೆ ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ, ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಒತ್ತಡದ ಭಾರ ಇಳಿಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ. ರವಿ ಗುಂಜೀಕರ ಮಾತನಾಡಿ, ನೌಕರರಿಗೆ ಚೈತನ್ಯ ಹೆಚ್ಚಿಸಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಸರ್ಕಾರಿ ನೌಕರರ ಕುಟುಂಬಸ್ಥರ ಸಮ್ಮುಖದಲ್ಲಿ ಕ್ರೀಡಾಕೂಟಗಳು ಜರುಗಲಿವೆ. ನೌಕರರು ತಮ್ಮ ಕಲೆ ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆ ಆಗಿದೆ. 12 ತಿಂಗಳು ತಮ್ಮ ಒತ್ತಡದ ಕೆಲಸದ ನಡುವೆ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಬಹುದು. ಆನ್ ಲೈನ್ ಮೂಲಕ 1,500 ನೌಕರರು ನೊಂದಣಿ ಮಾಡಿಸಿದ್ದಾರೆ. ಪ್ರತಿ ವರ್ಷಕ್ಕಿಂತ ಹೆಚ್ಚು ನೌಕರರು ಪ್ರಸಕ್ತ ಸಾಲಿನಲ್ಲಿ ಭಾಗವಹಿಸಲಿದ್ದಾರೆ. ಕ್ರೀಡಾಕೂಟಕ್ಕಾಗಿ 80 ದೈಹಿಕ ಶಿಕ್ಷಕರನ್ನು ನಿಯೋಜನೆ ಮಾಡಿಕೋಳ್ಳಲಾಗಿದೆ ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಮೂರು ವಿಭಾಗಗಳಾಗಿ ವಿಂಗಡಣೆ ಮಾಡಲಾಗಿದೆ. 18 ವರ್ಷದಿಂದ 40 ವರ್ಷದವರೆಗೆ ಮೊದಲ ಹಂತ, 40 ರಿಂದ 50 ವರ್ಷದೊಳಗಿನವರಿಗಾಗಿ ಎರಡನೇ ಹಂತ ಮತ್ತು 50 ರಿಂದ 60 ವರ್ಷದೊಳಗಿನವರಿಗಾಗಿ ಮೂರು ಹಂತಗಳನ್ನಾಗಿ ಮಾಡಲಾಗಿದ್ದು, ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯೋಮಿತಿ ನಿಗದಿಪಡಿಸಿಲ್ಲ ಎಂದು ಡಾ. ಬಸವರಾಜ ಬಳ್ಳಾರಿ ತಿಳಿಸಿದ್ದಾರೆ. ಈ ವೇಳೆ ಹಲವರು ಭಾಗಿಯಾಗಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande