ಹೊಸ ವರ್ಷಕ್ಕೆ ಸಕಲ ಸಿದ್ಧತೆ ಪೂರ್ಣ : ಎಸ್ಪಿ ನಿಂಬರಗಿ
ವಿಜಯಪುರ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹೊಸ ವರ್ಷ ಆಗಮನ ಹಿನ್ನೆಲೆ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್‌ಗಳನ್ನು ಕೈಗೊಂಡಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಡಿಸೆಂಬರ್ 31 ಹಾಗೂ ಜನವರಿ 1ರಂದು ವಿವಿಧ ಜನನಿಬಿಡ ಸ್ಥಳದ
ಎಸ್ಪಿ


ವಿಜಯಪುರ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹೊಸ ವರ್ಷ ಆಗಮನ ಹಿನ್ನೆಲೆ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್‌ಗಳನ್ನು ಕೈಗೊಂಡಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಡಿಸೆಂಬರ್ 31 ಹಾಗೂ ಜನವರಿ 1ರಂದು ವಿವಿಧ ಜನನಿಬಿಡ ಸ್ಥಳದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಅಲ್ಲದೇ, ಈಗಾಗಲೇ ಆಯಾ ಪೊಲೀಸ್ ಠಾಣಾ ಲಿಮಿಟ್‌ಗಳಲ್ಲಿ ಹೋಟೆಲ್ ಮಾಲೀಕರೊಂದಿಗೆ ಪೊಲೀಸರು ಸಭೆ ನಡೆಸಿದ್ದಾರೆ. ಹೋಟೆಲ್‌ಗಳಲ್ಲಿ ಸಿಸಿಟಿವಿಗಳನ್ನು ಬಳಸಲು ಸೂಚನೆ ನೀಡಲಾಗಿದೆ. ಒಂದು ವೇಳೆ ಅಹಿತಕರ ಘಟನೆಗಳನ್ನು ಮಾಡಿದ್ರೇ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ಎಸ್ಪಿ ನಿಂಬರಗಿ ಎಚ್ಚರಿಕೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande