
ಅಯೋಧ್ಯೆ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪ್ರತಿಷ್ಠಾ ದ್ವಾದಶಿಯ ಅಂಗವಾಗಿ ಇಂದು ಅಯೋಧ್ಯೆಯ ಭವ್ಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಶ್ರೀ ರಾಮಲಲ್ಲಾ ಅಭಿಷೇಕ ಹಾಗೂ ಪ್ರತಿಷ್ಠಾಪನಾ ವಿಧಿವಿಧಾನಗಳು ನಡೆಯಲಿವೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
ಅಯೋಧ್ಯೆಗೆ ಆಗಮಿಸುವ ರಾಜನಾಥ್ ಸಿಂಗ್ ಅವರು ದೇವಾಲಯ ಸಂಕೀರ್ಣದಲ್ಲಿ ಯಾಗ–ಹವನ, ಪೂಜೆ ಸೇರಿದಂತೆ ವಿವಿಧ ಆಚರಣೆಗಳಲ್ಲಿ ಪಾಲ್ಗೊಳ್ಳಲಿದ್ದು, ಅನ್ನಪೂರ್ಣ ದೇವಾಲಯದ ಮೇಲ್ಭಾಗದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶ್ರೀ ರಾಮಲಲ್ಲಾ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮಗಳನ್ನು ವೈಭವದಿಂದ ಆಯೋಜಿಸಲಾಗಿದೆ.
ಸಂತರು, ಧಾರ್ಮಿಕ ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಬಳಿಕ ರಕ್ಷಣಾ ಸಚಿವರು ಅಂಗದ್ ತಿಲಾ ಸಂಕೀರ್ಣದಲ್ಲಿ ನಡೆಯುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa