ನಾಳೆ ಕೊಪ್ಪಳ ಗವಿಮಠದಲ್ಲಿ `ಬಸವ ಪಟ’
ಕೊಪ್ಪಳ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದಿನಾಂಕ 01-01-2026, ಗುರುವಾರ, ಮಧ್ಯಾಹ್ನ 2;00 ಗಂಟೆಗೆ ಬಸವ ಪಟ ಕಾರ್ಯಕ್ರಮ ಶ್ರೀ ಗವಿಸಿದ್ಧೇಶ್ವರ ಕರ್ತೃ ಗದ್ದುಗೆ ಹತ್ತಿರ ಜರುಗಲಿದೆ. ಈ ಕಾರ್ಯಕ್ರಮವು ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವದ ಮುನ್ನಾ ದಿನ ‘ಬಸವಪಟ ಆರೋಹಣ’ ಎಂಬ ಧಾರ್ಮ
ನಾಳೆ ಕೊಪ್ಪಳ ಗವಿಮಠದಲ್ಲಿ `ಬಸವ ಪಟ’


ಕೊಪ್ಪಳ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದಿನಾಂಕ 01-01-2026, ಗುರುವಾರ, ಮಧ್ಯಾಹ್ನ 2;00 ಗಂಟೆಗೆ ಬಸವ ಪಟ ಕಾರ್ಯಕ್ರಮ ಶ್ರೀ ಗವಿಸಿದ್ಧೇಶ್ವರ ಕರ್ತೃ ಗದ್ದುಗೆ ಹತ್ತಿರ ಜರುಗಲಿದೆ.

ಈ ಕಾರ್ಯಕ್ರಮವು ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವದ ಮುನ್ನಾ ದಿನ ‘ಬಸವಪಟ ಆರೋಹಣ’ ಎಂಬ ಧಾರ್ಮಿಕ ಕಾರ್ಯಕ್ರಮವೂ ಜರುಗುತ್ತದೆ.

ಭಕ್ತರು ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪ್ರಣವ ಮಂತ್ರವಿರುವ ಬಸವಪಟಕ್ಕೆ ವಿದ್ಯುಕ್ತವಾಗಿ ಪೂಜೆ ಸಲ್ಲಿಸಿ, ನೈವೇದ್ಯ ಮಾಡಿ ಆ ಬಳಿಕ ಅದನ್ನು ಶ್ರದ್ಧೆಯಿಂದ ತಲೆಯ ಮೇಲೆ ಹೊತ್ತುಕೊಂಡು ಶ್ರೀ ಗವಿಮಠದ ಕರ್ತೃ ಗದ್ದುಗೆಯ ಸುತ್ತ ಐದು ಸಾರಿ ಪ್ರದಕ್ಷಿಣೆ ಹಾಕುತ್ತಾ ಗವಿಸಿದ್ಧೇಶ್ವರನ ಜಯಘೋಷಗಳೊಂದಿಗೆ ಕರ್ತೃ ಗದ್ದುಗೆಯ ಮುಂಭಾಗದ ಎದುರಿಗಿರುವ ಶಿಲಾಸ್ತಂಭಕ್ಕೆ ಬಸವ ಪಟವನ್ನು ಆರೋಹಣಗೊಳಿಸುವುದು. ಇದುವೇ ‘ಬಸವಪಟ ಆರೋಹಣ’.

ಬಸವ ಪಟ ಆರೋಹಣ ಮಾಡುವ ಉದ್ದೇಶ: ನಮ್ಮದು ಕೃಷಿ ಪ್ರಧಾನ ನಾಡು.ಆ ಕಾರಣಕ್ಕಾಗಿ ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪೃಕೃತಿ ಇವುಗಳಿಗೆ ಪೂಜೆ ಸಲ್ಲಿಸುವದು ನಮ್ಮ ಪ್ರಥಮ ಕರ್ತವ್ಯವಾಗಿದೆ. ಶ್ರೀ ಗವಿಸಿದ್ಧನ ಸನ್ನಿಧಿಯ ಈ ನಾಡಿನಲ್ಲಿ ಸದಾಕಾಲ ಉತ್ತಮ ಮಳೆ, ಉತ್ತಮ ಬೆಳೆ ಬಂದು ರೈತಾಪಿ ವರ್ಗಕ್ಕೆ ಸುಖ, ಶಾಂತಿ, ಸಮೃದ್ಧಿ ಸದಾ ದೊರೆಯಲೆಂಬ ಆಶಯಕ್ಕಾಗಿ ‘ಬಸವಪಟ ಆರೋಹಣ’ ಕಾರ್ಯಕ್ರಮವು ಜರುಗುತ್ತದೆ.

ಶ್ರೀಮಠದ ಜಾತ್ರಾ ಪರಂಪರೆಯಲ್ಲಿ ಬಸವಪಟ ಆರೋಹಣ ಕಾರ್ಯಕ್ರಮದ ಮೂಲಕವೇ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಂತಾಗುತ್ತದೆ. ಹಾಗೆಯೇ ಆಗಮಿಸಿದ ಶಿವಯೋಗಿಗಳಿಗೆ ಹಾಗೂ ಜಂಗಮ ಪುಂಗವರಿಗೆ ಪ್ರಸಾದ ಸೇವಾ ಕಾರ್ಯವು ಸಹ ಅನುಚಾನವಾಗಿ ನಡೆದು ಬಂದಿದೆ.

ಹೆಚ್ಚಿನ ಮಾಹಿತಿಗಾಗಿ ಈ ಮೋಬೈಲ್ 8123932545 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

ಗುರುವಾರ, ಸಂಜೆ 5.00 ಗಂಟೆಗೆ, ತೆಪ್ಪೋತ್ಸವ ಹಾಗೂ ಸಂಗೀತ

ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಖ್ಯಾತವಾದ ಸಂಸ್ಥಾನ ಶ್ರೀ ಗವಿಮಠದ ಜಾತ್ರಾ ಮಹೋತ್ಸವ ವರ್ಷದಿಂದ ವರ್ಷಕ್ಕೆ ಅತ್ಯಂತ ಮಹತ್ವ ಪಡೆದುಕೊಳ್ಳುತ್ತಿದೆ. ಇದು ಕೇವಲ ಸಾಂಪ್ರ್ರದಾಯಿಕ ಜಾತ್ರೆಯಾಗಿರದೆ, ಜ್ಞಾನ ವೈಚಾರಿಕತೆ, ಸಂಸ್ಕøತಿಯ ಮೇಲೆ ಬೆಳಕು ಚೆಲ್ಲಿ ಮುನ್ನಡೆಸುವ ಮಹತ್ವದ ಜಾತ್ರೆಯಾಗಿದೆ.

ಇಲ್ಲಿಗೆ ಆಗಮಿಸುವ ಯಾತ್ರಿಕರಲ್ಲಿ ಭಕ್ತಿಯ ಜೊತೆಗೆ ಏನೋ ಆನಂದ ಉತ್ಸಾಹ ಮಡುಗಟ್ಟಿ ನಿಂತಿರುತ್ತದೆ. ಜಾತ್ರಾ ಮಹೋತ್ಸವದಲ್ಲಿ ಅತ್ಯಂತ ಕಣ್ಮನ ಸೆಳೆಯುವ ಉತ್ಸವ ತೆಪೆÇ್ಪೀತ್ಸವ. ದಿನಾಂಕ 01-01-2026ಗುರುವಾರ, ಸಂಜೆ 5.00 ಗಂಟೆಗೆ, ಶ್ರೀ ಗವಿಮಠ ಆವರಣದಲ್ಲಿನ ಕೆರೆಯಲ್ಲಿ ತೆಪ್ಪೋತ್ಸವ ಹಾಗೂ ಜಿ ಕನ್ನಡ ಖ್ಯಾತಿಯ ಕುಮಾರಿ. ಶಿವಾನಿ ಶಿವದಾಸ ಸ್ವಾಮಿ ಬೀದರ್ ಹಾಗೂ ತಂಡದ ಸಂಗೀತ ಕಲಾವಿದರಿಂದ ಸಂಜೆ 6:00ಗಂಟೆಗೆ ಹಾಗೂ ಸಂಗೀತ ಕಾರ್ಯಕ್ರಮ ಜರುಗಲಿದೆ.

ತೆಪೆÇ್ಪೀತ್ಸವ: ತೆಪ್ಪೋತ್ಸವಕ್ಕೆ ಭಕ್ತರು ಆಗಮಿಸಿ ಮಹಾಮಹಿಮ ಕತೃ ಗವಿಶಿದ್ಧೇಶನನ್ನು ಸಂಕಲ್ಪ ಮಾಡಿಕೊಂಡರೆ ಇಷ್ಟಾರ್ಥ ಸಿದ್ಧಿಸುತ್ತದೆಂಬ ನಂಬಿಕೆ ಭಕ್ತಾದಿಗಳಲ್ಲಿದೆ.ತೆಪ್ಪೋತ್ಸವ ಎಂದರೆ ಭಾವಿ, ಕೆರೆ, ನದಿಗಳಲ್ಲಿ ತೆಪ್ಪದ ಮೇಲೆ ನಡೆಯುವ ದೇವರ ಉತ್ಸವೆಂದು ಅರ್ಥ.ಎರಡು ತೆಪ್ಪಗಳ ನಡುವೆ ಹಲಗೆಯಿಂದ ನಿರ್ಮಿಸಲಾದ ವೇದಿಕೆಯಲ್ಲಿ ಶ್ರೀ ಗವಿಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗÀಳೊಂದಿಗೆ ಕರೆ ತಂದು ಬಾಳೆ, ಕಬ್ಬು, ಮಾವಿನ ತಳಿರು ತೋರಣ, ಹಾಗೂ ಹೂವಿನಿಂದ ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಶ್ರೀ ಗವಿಸಿದ್ಧೇಶ್ವರ ಮೂರ್ತಿಯನ್ನು ಮೂಹೂರ್ತಗೊಳಿಸಿದ ತೆಪ್ಪವನ್ನು ನಾಲ್ಕು ದಿಕ್ಕುಗಳಲ್ಲಿ ಭಕ್ತಾದಿಗಳು ಹಗ್ಗದ ಮೂಲಕ ಹಾಗೂ ಅಂಬಿಗರ ಸಹಾಯದಿಂದ ಹುಟ್ಟು ಹಾಕಿ ಸಾಗಿಸುತ್ತಾರೆ.

ಸುಂದರ ವಾತಾವರಣದ ಶುಭ ಸಾಯಂಕಾಲ ಸೂರ್ಯನ ಬಂಗಾರ ಕಿರಣ ನಿರ್ಗಮನ, ಚಂದ್ರನ ಬೆಳ್ಳಂ ಬೆಳಕಿನ ಕಿರಣಗಳ ಆಗಮನದಲ್ಲಿ ಜರುಗುವ ಈ ಮಹೋತ್ಸವ ಭಕ್ತರನ್ನು ಆನಂದದಲ್ಲಿ ಭಕ್ತಿಯಲ್ಲಿ ತೇಲಾಡಿ ಮಂತ್ರಮುಗ್ದಗೊಳಿಸುತ್ತದೆ. ಪ್ರಾಕೃತಿಕ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಶೃಂಗಾರಗೊಂಡ ಶ್ರೀ ಗವಿಮಠದ ಆವರಣದಲ್ಲಿ ಪುಷ್ಕರಣಿಯು ಅಕ್ಷರಶಃ ಸರೋವರದಂತೆ ಕಾಣುವ ಶ್ರೀ ಮಠದ ಕೆರೆಯು ನೋಡಲು ಸುಂದರ, ಮನೋಹರವಾಗಿ ಕಾಣುವುದು.ನಿಸರ್ಗದ ಕಣ್ಮನ ಸೆಳೆಯುವ ಕೆರೆಯಲ್ಲಿ ಸುಂದರ ಮಧುವಣಗಿತ್ತಿಯಂತೆ ಶೃಂಗಾರಗೊಂಡ ತೆಪ್ಪವು ದೈವದ ತೊಟ್ಟಿಲಿನಂತೆ ತೆಲುತ್ತ ಶ್ರೀ ಗವಿಸಿದ್ಧೇಶ್ವರನ ಭವ್ಯ ಮೂರ್ತಿಯನ್ನು ತನ್ನ ಮಡಿಲಲ್ಲಿ ಆಸಿನ ಗೊಳಿಸುಕೊಂಡು ತೂಗುತ್ತಾ, ತೊನೆಯುತ್ತಾ ಭಕ್ತರ ಮನಗಳನ್ನು ತಣಿಸುತ್ತದೆ. ಸುಗಂಧ ಭರಿತ ಪುಷ್ಪಗಳಿಂದ ಅಲಂಕಾರಗೊಂಡ ತೆಪ್ಪವು ನೋಡಲು ಸುಂದರ ಮನೋಹರ. ಭವ್ಯ ಮೆರವಣಿಗೆಯಿಂದ ಪಲ್ಲಕ್ಕಿಯಲ್ಲಿ ಸಾವಿರಾರು ಭಕ್ತರ ನಡುವೆ ವಿರಾಜಮಾನರಾದ ಶ್ರೀ ಗವಿಸಿದ್ಧೇಶ್ವರನ ಭವ್ಯ ಮೂರ್ತಿಯನ್ನು ತೆಪ್ಪದಲ್ಲಿ ಪ್ರತಿμÁ್ಠಪಿಸಿದಾಗ ನೆರೆದ ಲಕ್ಷೋಪಲಕ್ಷ ಭಕ್ತರ ಮನವು ಸ್ವರ್ಗವೇ ಧರೆಗಿಳಿದಂತೆ ಪುಳಕಗೊಳ್ಳುವದು.

ಹೆಚ್ಚಿನ ಮಾಹಿತಿಗಾಗಿ ಈ ಮೋಬೈಲ್ 9880312153, 9945467221 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande