

ತಿರುವನಂತಪುರಂ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು.
ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಜರಿದ್ದರು.
ಇದೇ ವೇಳೆ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ವೇದಿಕೆಯಲ್ಲಿ ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa