ಹರಪನಹಳ್ಳಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ
ಹರಪನಹಳ್ಳಿ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಳೆದ ಎರಡುವರೆ ವರ್ಷದಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಗೆ 360 ಕೋಟಿ ರೂ, ರಾಜ್ಯಕ್ಕೆ 14 ಸಾವಿರ ಕೋಟಿ ರೂಗಳ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಸೃಷ್
ಹರಪನಹಳ್ಳಿ :ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ


ಹರಪನಹಳ್ಳಿ :ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ


ಹರಪನಹಳ್ಳಿ :ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ


ಹರಪನಹಳ್ಳಿ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಳೆದ ಎರಡುವರೆ ವರ್ಷದಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಗೆ 360 ಕೋಟಿ ರೂ, ರಾಜ್ಯಕ್ಕೆ 14 ಸಾವಿರ ಕೋಟಿ ರೂಗಳ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಸೃಷ್ಟಿಸಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಭೈರತಿ ಸುರೇಶ್ ಹೇಳಿದರು.

ಹರಪನಹಳ್ಳಿ ಪಟ್ಟಣದ ಹಳೆಯ ಬಸ್ ನಿಲ್ದಾಣದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾಡಳಿತ, ನಗರಸಭೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಹರಪನಹಳ್ಳಿ ಪಟ್ಟಣಕ್ಕೆ ಸುಧಾರಿತ ಸಗಟು ನೀರು ಸರಬರಾಜು ಕಲ್ಪಿಸುವ ಯೋಜನೆ ಶಂಕುಸ್ಥಾಪನೆ ಮತ್ತು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪಂಚಗ್ಯಾರಂಟಿ ಯೋಜನೆಗೆ ಪ್ರತಿ ಬಜೆಟ್‌ನಲ್ಲಿ 60 ಸಾವಿರ ಕೋಟಿ ರೂ.ಗಳನ್ನು ನಿಗಧಿಪಡಿಸಿ ಜನಸಾಮಾನ್ಯರ ಆರ್ಥಿಕ ಸುಧಾರಣೆಗೆ ಆದ್ಯತೆ ನೀಡಲಾಗಿದೆ. ಅದರಲ್ಲೂ ಮಹಿಳೆಯರನ್ನು ಆರ್ಥಿಕವಾಗಿ ಸಧೃಡರನ್ನಾಗಿಸಲು ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಗಳು, ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಉಚಿತ ಪ್ರಯಾಣಕ್ಕೆ ಅನುಕೂಲ, ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಪೂರೈಕೆ. ಅನ್ನಭಾಗ್ಯದ ಮೂಲಕ ಪ್ರತಿ ಮನೆಗೆ ಉಚಿತ ಅಕ್ಕಿ ವಿತರಣೆ ಮಾಡುವ ಮೂಲಕ ಮದ್ಯಮ ವರ್ಗದ ಜನರಿಗೆ ಅರ್ಥಿಕ ಸಶಕ್ತರನ್ನಾಗಿಸಿದೆ. ಅಷ್ಟಲ್ಲದೇ ರಾಜ್ಯದಲ್ಲಿ ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಎಲ್ಲಾ ಕ್ಷೇತ್ರಗಳಿಗೆ ಅನುದಾನವನ್ನು ಕಲ್ಪಿಸಲಾಗುತ್ತಿದೆ.

ಸಿದ್ದರಾಮಯ್ಯನವರ ಅನುಭವ ರಾಜಕಾರಣವೇ ರಾಜ್ಯದಲ್ಲಿನ ಪ್ರಗತಿಗೆ ಕಾರಣವಾಗಿದೆ. ಮಾಜಿ ಸಚಿವ ದಿ.ಎಂ.ಪಿ.ಪ್ರಕಾಶ್ ಮತ್ತು ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರರವರ ದೂರದೃಷ್ಟಿ ಅಭಿವೃದ್ಧಿ ಚಿಂತನೆಗಳನ್ನು ಹಾಲಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರಲ್ಲಿ ಕಾಣಬಹುದಾಗಿದೆ. ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಅನೇಕ ಬಾರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಹರಪನಹಳ್ಳಿಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಅಗತ್ಯ ಅನುದಾನವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಕಳೆದ ನಾಲ್ಕು ತಿಂಗಳ ಹಿಂದೆ ರಾಜ್ಯ ಸರ್ಕಾರ ಹರಪನಹಳ್ಳಿಯನ್ನು ಪುರಸಭೆಯಿಂದ ನಗರಸಭೆಯನ್ನಾಗಿ ಮೇಲ್ದರ್ಜಗೇರಿಸಲಾಗಿದೆ. ಇದೀಗ ಕ್ಷೇತ್ರದಲ್ಲಿ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಹರಪನಹಳ್ಳಿ ನಗರಕ್ಕೆ 43.36 ಕೋಟಿರೂ ವೆಚ್ಚದಲ್ಲಿ ಸುಧಾರಿತ ಸಗಟು ನೀರು ಸರಬರಾಜು ಕಲ್ಪಿಸುವ ಯೋಜನೆಯ ಶಂಕುಸ್ಥಾಪನೆಯನ್ನು ನೇರವೇರಿಸಲಾಗಿದೆ. ನಗರದಲ್ಲಿ ಇನ್ನು ಹೊಸ ವಸತಿ ಬಡಾವಣೆ ಸೇರಿ 22 ಕಿಮೀ ನಷ್ಟು ಪೈಪ್‌ಲೈನ್ ಅಳವಡಿಸಬೇಕಿದೆ.

ಜನಸಂಖ್ಯೆ ಹೆಚ್ಚಿರುವುದರಿಂದ 12000 ಮನೆಗಳಿಗೆ ನೀರು ತಲುಪಿಸಲು ಸಾಧ್ಯವಾಗಿಲ್ಲ. ಈ ಯೋಜನೆಗೆ ಸರ್ವೇ ಕಾರ್ಯಮುಗಿಸಿ ಕ್ರಿಯಾಯೋಜನೆ ಸಿದ್ದಪಡಿಸಿದ್ದು ಅಂದಾಜು 61 ಕೋಟಿ ರೂಗಳಷ್ಟು ಅನುದಾನ ಅಗತ್ಯವಿದೆ. ನಗರದ ಒಳಚರಂಡಿ ವ್ಯವಸ್ಥೆಗೆ ಅಸಮರ್ಪಕವಾಗಿರುವ ಹಿನ್ನಲೆಯಲ್ಲಿ ನಗರದ ಎಲ್ಲಾ ಚರಂಡಿ ನೀರು ಸಮೀಪದ ಅಯ್ಯನಕೆರೆಗೆ ಸಂಗ್ರಹವಾಗುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಕೊಳಚೆ ನೀರು ಸಂಗ್ರಹವಾಗುವ ಕೆರೆ ಎಂದು ಅಯ್ಯನಕೆರೆಯನ್ನು ಗುರುತಿಸಲಾಗಿದೆ.

ಶೀಘ್ರವೇ ಅಯ್ಯನಕೆರೆ ಉನ್ನತೀಕರಣ ಮತ್ತು ಅಭಿವೃದ್ಧಿಗೆ ಅಂದಾಜು 63 ಕೋಟಿ ರೂ.ಗಳ ಅನುದಾನ ಅಗತ್ಯವಿದೆ. ನಗರದ ಪ್ರಮುಖ ವೃತ್ತಗಳ ಅವೈಜ್ಞಾನಿಕ ನಿರ್ಮಾಣದಿಂದ ಅಗಲೀಕರಣ ಮತ್ತು ನವೀಕರಣ ಅಗತ್ಯವಿದೆ. ನಗರದ ಬಸ್ ನಿಲ್ದಾಣದಲ್ಲಿ ಪ್ರತಿ ದಿನ 10 ಸಾವಿರ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾರೆ. ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಮತ್ತು ನವೀಕರಣಗೊಳಿಸಲು ಕ್ರಿಯಾಯೋಜನೆ ಸಿದ್ದಪಡಿಸಿದೆ, ಇದಕ್ಕೆ 10 ಕೋಟಿ ರೂಗಳ ಅನುದಾನ ಅಗತ್ಯವಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಸಮಸ್ಯೆಯ ಕುರಿತು ಪ್ರಸ್ತಾಪಿಸಿದಾಗ 2 ಕೋಟಿ ರೂಗಳ ಅನುದಾನ ನೀಡಲಾಗಿದೆ. ಇನ್ನುಳಿದ ಅನುದಾನದ ಲಭ್ಯತೆಗೆ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಿ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಗ್ರಹಿಸಿದರು.

ಇದೇ ವೇಳೆ ವೇದಿಕೆಯಲ್ಲಿ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಹರಪನಹಳ್ಳಿ ನಗರಕ್ಕೆ 43.36 ಕೋಟಿರೂ ವೆಚ್ಚದಲ್ಲಿ ಸುಧಾರಿತ ಸಗಟು ನೀರು ಸರಬರಾಜು ಕಲ್ಪಿಸುವ ಯೋಜನೆಯ ಶಂಕುಸ್ಥಾಪನೆ, ಚನ್ನಹಳ್ಳಿ ತಾಂಡಾ ಗ್ರಾಮದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಜಿನುಗು ಕೆರೆಯ ನಿರ್ಮಾಣ ಶಂಕುಸ್ಥಾಪನೆ, ಹರಪನಹಳ್ಳಿ ನಗರದಲ್ಲಿ 4.56 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟದ ಶಂಕುಸ್ಥಾಪನೆ, ನಿಚ್ಚವ್ವನಹಳ್ಳಿ, ಕಡಬಗೆರೆ ಮತ್ತು ಮಾಡ್ಲಗೆರೆ ಗ್ರಾಮಗಳಲ್ಲಿ ತಲಾ 60 ಲಕ್ಷರೂ ವೆಚ್ಚದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಮತ್ತು ಕ್ಷೇಮಕೇಂದ್ರಗಳ ಉದ್ಘಾಟನೆ, ನಗರದಲ್ಲಿ 2.30 ಕೋಟಿರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ, ವಿವಿಧ ಗ್ರಾಮಗಳಲ್ಲಿ ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ, ನರೇಗಾ ಯೋಜನೆಯಡಿ 2 ಘನತ್ಯಾಜ್ಯ ವಿಲೇವಾರಿ ಘಟಕಗಳ ಉದ್ಘಾಟನೆ, 87 ಸ್ಮಶಾನಗಳು ಮತ್ತು ಭೋಜನ ಶಾಲೆ ಉದ್ಘಾಟನೆ, ಕಾರ್ಮಿಕ ಇಲಾಖೆಯಿಂದ 25 ಫಲಾನುಭವಿಗಳಿಗೆ ಮನೆಗಳ ಆದೇಶ ಪತ್ರ ವಿತರಣೆ, ಹರಪನಹಳ್ಳಿ ಕ್ಷೇತ್ರದ 20 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2 ಕೋಟಿರೂ ವೆಚ್ಚದ ಸ್ಮಾರ್ಟ್ ಕ್ಲಾಸ್ ಅಳವಡಿಸುವ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಸಮಾರಂಭದಲ್ಲಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಉದಯ ಶಂಕರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮನೋಹರ, ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರ ಡಿ.ಮಂಜುನಾಥ, ಕಾರ್ಯಪಾಲಕ ಅಭಿಯಂತರರಾದ ದೀಪಾ, ನಗರಸಭೆ ಪೌರಾಯುಕ್ತರಾದ ರೇಣುಕಾ ಎಸ್.ದೇಸಾಯಿ, ತಹಶೀಲ್ದಾರ್ ಬಿ.ವಿ.ಗೀರಿಶ್ ಬಾಬು ವೇದಿಕೆಯಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande