
ಹೊಸಪೇಟೆ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವವಿಖ್ಯಾತ 2026ರ ಹಂಪಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆ ಕಾರ್ಯಕ್ರಮಗಳನ್ನು ನೀಡಲು ಆಸಕ್ತ ಕಲಾವಿದರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ನಿಗದಿತ ಹಂಪಿ ಉತ್ಸವಕ್ಕೆ ಮೆರಗು ಹೆಚ್ಚಿಸಲು ಸಾಂಸ್ಕೃತಿಕ ಉತ್ಸವಗಳು, ಮೆರವಣಿಗೆ ಕಾರ್ಯಕ್ರಮಗಳಲ್ಲಿ ಸ್ಥಳೀಯ, ಹೊರ ಜಿಲ್ಲೆ ಮತ್ತು ರಾಜ್ಯದವರು ಭಾಗವಹಿಸಬಹುದು. ಆಸಕ್ತ ಕಲಾವಿದರಿಗೆ ಜ.20 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಕಲಾವಿದರು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹಾಗೂ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಲಾವಿದರು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ಕಡ್ಡಾಯವಾಗಿ ಅನುಮತಿ ಪತ್ರದೊಂದಿಗೆ ಅರ್ಜಿ ಸಲ್ಲಿಸಿದಲ್ಲಿ ಮಾತ್ರ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್