
ಬಳ್ಳಾರಿ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬ0ಧಿಸಿದ0ತೆ ಬಳ್ಳಾರಿ ನಗರ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.
ಅಂತಿಮ ಮತದಾರರ ಪ್ರತಿಯನ್ನು ತಿದ್ದುಪಡಿಗಳೊಂದಿಗೆ ಪ್ರಕಟಿಸಲಾಗಿದ್ದು, ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಪರಿಶೀಲನೆಗೆ ಲಭ್ಯವಿದ್ದು, ಮತದಾರರು ಪರಿಶೀಲಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್